ದಾವಣಗೆರೆ ಜು.10 : ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಪದವಿ, ಡಿಪ್ಲೋಮಾ ಜೆ.ಓ.ಸಿ ವೃತ್ತಿಪರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 30 ರೊಳಗಾಗಿ ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೊ ಆ ಜಿಲ್ಲೆಗೆ ಸಂಬAಧಿಸಿದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂ.ಸಂ: 08182-220925 ಗೆ ಸಂಪರ್ಕಿಸಬೇಕೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರಾದ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.