ದಾವಣಗೆರೆ, ಆ.30 (Davangere) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾರ್ಥಿವೇತನ ಪಡೆಯುವುದಕ್ಕಾಗಿ ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವೆಬ್‍ಸೈಟ್ https://ssp.postmatric.karnataka.gov.in/ ಮತ್ತು https://ssp.postmatric.karnataka.gov.in/CA/ ಹಾಗೂ https://ssp.postmatric.karnataka.gov.in/ssppre/ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.
Read also : Davanagere news | ಸೊಳ್ಳೆಗಳಿಂದ ಹರಡುವ ಕಾಯಿಲೆ ಬಗ್ಗೆ ಎಚ್ಚರ ವಹಿಸಿ : ಡಾ. ಅಬ್ದುಲ್ ಖಾದರ್
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. ‘ಬಿ’ ಬ್ಲಾಕ್, ದಾವಣಗೆರೆ. ದೂ.ಸಂ 08192-263939 ಮತ್ತು ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.