ದಾವಣಗೆರೆ,ಜುಲೈ.13 : ಹರಿಹರ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದು ತಾತ್ಕಾಲಿಕ ಹುದ್ದೆಯಾಗಿದ್ದು ಅರ್ಹ ಆಸಕ್ತರು ಅರ್ಜಿಯನ್ನು ಜಿಲ್ಲಾಧಿಕಾರಿ ಕಚೇರಿ ಕೊಠಡಿ ಸಂಖ್ಯೆ 5 ರಲ್ಲಿ ಜೆಹೆಚ್ ಎಂ ಶಿರಸ್ತೇದಾರ್ ಇವರಿಂದ ಪಡೆದು
7 ವರ್ಷಗಳ ಕಾಲ ವಕೀಲ ವೃತ್ತಿಯಲ್ಲಿ ಸೇವಾನುಭವ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ಅರ್ಹತೆ ದಾಖಲೆಗಳು,
ಗುಣ ನಡತೆ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜುಲೈ 25 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.