ದಾವಣಗೆರೆ : ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಬುಡಕಟ್ಟು ಸಮುದಾಯದ, ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್‌ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ, ತ್ರಿ-ಚಕ್ರವಾಹನ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನವಾಗಿರುತ್ತದೆ.
Read also : Crime news|ಕುಂದವಾಡ ಕೆರೆಯಲ್ಲಿ ಇಬ್ಬರು ಯುವಕರು ಮುಳುಗಿ ಮೃತ
ಆಸಕ್ತ ಮೀನುಗಾರರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು, ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
