ದಾವಣಗೆರೆ ಮೇ.13 (Davanagere) : ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ WWW.schooleducation.karnataka.
ಹುದ್ದೆಗಳ ವಿವರ: ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ) ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು, ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ) ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.
Read also : Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕ ಕೊಟ್ರೇಶ್.ಜಿ ತಿಳಿಸಿದ್ದಾರೆ.