ದಾವಣಗೆರೆ ಜ. 29 : ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Read also : ದಾವಣಗೆರೆ ವಿಶ್ವವಿದ್ಯಾನಿಲಯ|ಮೂವರಿಗೆ ಗೌರವ ಡಾಕ್ಟರೇಟ್ :ಪ್ರೊ.ಕುಂಬಾರ
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
