ದಾವಣಗೆರೆ (Davanagere) : 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗದವರು ಅರ್ಜಿ ಸಲ್ಲಿಸಬಹುದು.
ವೆಬ್ ಸೈಟ್ https://shp.karnataka.gov.in/
Read also : ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ವೀಕ್ಷಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8050770004 ಮತ್ತು 8050770005 ನ್ನು ಸಂಪರ್ಕಿಸಲು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.