ದಾವಣಗೆರೆ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ಪಂಗಡದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:45, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ. ಇಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 10 ರೊಳಗಾಗಿ ಸಲ್ಲಿಸಬೇಕು.
Read also : ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ : ಸಾಧನೆಗೈದ ವಿದ್ಯಾರ್ಥಿಗಳು
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ.