ದಾವಣಗೆರೆ : ಆಟೋದಲ್ಲಿ ಕುಳಿತಿದ್ದ ಚಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ನಗರದ ಎಸ್‌ಒಜಿ ಕಾಲೋನಿಯ ಎ ಬ್ಲಾಕ್‌ನ ಸಂಗಪ್ಪ (70 ) ಮೃತಪಟ್ಟ ಆಟೋ ಚಾಲಕ. ಎಂದಿನಂತೆ ಆಟೋ ಓಡಿಸಲು ಬಂದಿದ್ದ ಅವರು ಬೆಳಗ್ಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ನಿಲುಗಡೆ ಮಾಡಿದ್ದರು.
ಈ ವೇಳೆ ಆಟೋದಲ್ಲಿ ಕುಳಿತಿರುವಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.