ದಾವಣಗೆರೆ: ಬಾಪೂಜಿ ವಿದ್ಯಾಸಂಸ್ಥೆಯ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನ ಗ್ರಂಥಪಾಲಕ ಹೆಚ್. ಸತೀಶ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯವು ಇತ್ತೀಚೆಗೆ ನಡೆದ 106ನೇ ಘಟಿಕೋತ್ಸವದಲ್ಲಿ ಪಿಹೆಚ್.ಡಿ ಪದವಿ ಪ್ರದಾನ ಮಾಡಿದೆ.
ಹೆಚ್. ಸತೀಶ ಅವರು ಡಾ. ಎಂ. ಚಂದ್ರಶೇಖರ ಅವರ ಮಾರ್ಗದರ್ಶನದಲ್ಲಿ “Citation Analysis of Doctoral Theses in Biotechnology Submitted to the University of Mysore’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಹಾಪ್ರಬಂಧ ಮಂಡಿಸಿದ್ದರು.
Read also : ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಜನಪರವಾದ ಚಿಂತನೆಯಿತ್ತು:ಸಾಣೇಹಳ್ಳಿ ಶ್ರೀ
ಡಾ. ಹೆಚ್. ಸತೀಶ್ ಅವರ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
