ದಾವಣಗೆರೆ (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ, ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ಮತ್ತು ವಿದ್ಯಾಸಿರಿ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 15 ಕೊನೆಯ ದಿನವಾಗಿರುತ್ತದೆ.
ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
Read also : Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ನ್ನು ನೋಡಬಹುದು. ಹಾಗೂ 8050770005, ಇ-ಮೇಲ್ ವಿಳಾಸ bcwdhelpline@gmail.com, 1902 ಸಂಖ್ಯೆಗೆ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.