Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ
ತಾಜಾ ಸುದ್ದಿ

ಹರಿಹರ : ಎಸ್‍ಬಿಐ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಮನವಿ

Dinamaana Kannada News
Last updated: June 28, 2024 4:52 pm
Dinamaana Kannada News
Share
Harihara
ಹರಿಹರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.
SHARE

ಹರಿಹರ:  ನಗರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) 2ನೇ ಶಾಖೆ ಆರಂಭಿಸಲು ಆಗ್ರಹಿಸಿ ಬ್ಯಾಂಕ್ ಗ್ರಾಹಕರ ಹಿತ ರಕ್ಷಣಾ ಸಮಿತಿಯಿಂದ ಶುಕ್ರವಾರ ತಹಶೀಲ್ದಾರ್ ಗುರುಬಸವರಾಜ್ ಇವರಿಗೆ ಮನವಿ ನೀಡಲಾಯಿತು.

ಸಮಿತಿಯ ಪದಾಧಿಕಾರಿ ಜೆ.ಕಲೀಂಬಾಷಾ ಮಾತನಾಡಿ, ಈ ಹಿಂದೆ ಸ್ಟೇಟ್ ಬ್ಯಾಂಕ್ ಮೈಸೂರು ಶಾಖೆ ಎಸ್‍ಬಿಐ ಜೊತೆ ವಿಲೀನವಾಯಿತು. ಎರಡೂ ಬ್ಯಾಂಕುಗಳಲ್ಲಿ ಹಿಂದಿನಿಂದಲೆ ಗ್ರಾಹಕರ ಸಂಖ್ಯೆ ಅಧಿಕವಾಗಿತ್ತು. ಎರಡೂ ಬ್ಯಾಂಕುಗಳ ವಿಲೀನದ ನಂತರ ಎಸ್‍ಬಿಐ ಮುಂಚಿದ್ದ ವಿಸ್ತಾರವಾದ ಕಟ್ಟಡದಿಂದ ಚಿಕ್ಕ ಕಟ್ಟಡಕ್ಕೆ ವರ್ಗಾವಣೆಯಾಯಿತು, ಜೊತೆಗೆ ಸಿಬ್ಬಂದಿ ಸಂಖ್ಯೆಯನ್ನೂ ಕಡಿತಗೊಳಿಸಲಾಯಿತು. ಎರಡು ಬ್ಯಾಂಕುಗಳು ವಿಲೀನಗೊಂಡಾಗ ವಿಸ್ತಾರವಾದ ಕಟ್ಟಡಕ್ಕೆ ವರ್ಗಾವಣೆಯಾಗಿ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದು ಸಹಜ ಆದರೆ ಬ್ಯಾಂಕಿನ ಆಡಳಿತ ಮಂಡಳಿಯವರು ಇಲ್ಲಿ ಗ್ರಾಹಕ ವಿರೋಧಿ ನಿಲುವು ತಳೆದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಶಾಖೆಯಲ್ಲೀಗ ಅಂದಾಹು 5 ಸಾವಿರ ಗ್ರಾಹಕರ ಸಂಖ್ಯೆ ಇದೆ. ಬ್ಯಾಂಕಿನ ಕಟ್ಟಡ ಕಿಷ್ಕಿಂದೆಯಾಗಿರುವುದು ಹಾಗೂ ಸಿಬ್ಬಂದಿ ಕಡಿಮೆ ಇರುವುದರಿಂದ ಬ್ಯಾಂಕಿನ ಗ್ರಾಹಕರಿಗೆ ಸೂಕ್ತವಾದ ಸೇವೆ ಸಿಗುತ್ತಿಲ್ಲ. ಇದು ಸೇವಾ ನ್ಯೂನತೆಯನ್ನು ಬಿಂಬಿಸುತ್ತದೆ. ವ್ಯಾಪಾರಿಗಳು, ರೈತರು, ಸರ್ಕಾರಿ ಮತ್ತು ಖಾಸಗಿ ನೌಕರರು, ನಿವೃತ್ತ ನೌಕರರು ಅಪಾರ ಸಂಖ್ಯೆಯಲ್ಲಿ ಖಾತೆಯನ್ನು ಹೊಂದಿದ್ದಾರೆ. ಹರಿಹರ ನಗರದ ಜೊತೆಗೆ ಪಕ್ಕದ ಹರಪನಹಳ್ಳಿ, ರಾಣೆಬೆನ್ನೂರು ತಾಲ್ಲೂಕಿನ ಹತ್ತಾರು ಗ್ರಾಮಗಳ ಜನರೂ ಇಲ್ಲಿ ಖಾತೆ ಹೊಂದಿದ್ದಾರೆ. ಹೂವಿನಹಡಗಲಿಯಂತಹ ಪಟ್ಟಣದಲ್ಲಿ ಈ ಬ್ಯಾಂಕಿನ ಎರಡು ಶಾಖೆಗಳಿವೆ, ಜಿಲ್ಲೆಯ 2ನೇ ದೊಡ್ಡ ನಗರವಾದ ಹರಿಹರದ ಗ್ರಾಹಕರಿಗೆ ಸೂಕ್ತ ಸೇವೆಯನ್ನು ನೀಡುವ ಸಲುವಾಗಿ ಇನ್ನೊಂದು ಶಾಖೆಯನ್ನು ಆರಂಭಿಸುವ ಅಗತ್ಯವಿದೆ ಎಂದು ಅವರು ಆಗ್ರಹಿಸಿದರು.

ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ಜೆ.ಮರುಗೇಶಪ್ಪ, ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಾದ ರಮೇಶ್ ಮಾನೆ, ಮೊಹ್ಮದ್ ಇಲಿಯಾಸ್ ಬಡೇಘರ್, ಪ್ರೀತಮ್ ಬಾಬು, ಜೈ ಕರುನಾಡು ರಕ್ಷಣಾ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಕೊಡ್ಲಿ, ಬಿ.ಕೆ.ಅನ್ವರ್ ಬಾಷಾ, ಸೈಯದ್ ಅಹ್ಮದ್, ಸೈಯದ್ ರಿಯಾಜ್, ಐರಣಿ ಹನುಮಂತಪ್ಪ, ಕೆ.ಸಿ.ಪಟೇಲ್, ಟಿ.ಸಿ.ಉಸ್ಮಾನ್ ಅಲಿ, ಮುಕ್ತಮ್ ಬಾಷಾ, ಗೋವಿಂದರಾಜ್ ಇದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere  ಸುತ್ತಮುತ್ತಲಿನ ಪರಿಸರ ಸಂರಕ್ಷಿಸಿ : ನ್ಯಾ.  ಮಹಾವೀರ ಮಾ. ಕರೆಣ್ಣವರ್
Next Article Applications invited ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಇಬ್ಬರು ನಕಲಿ ವೈದ್ಯರಿಗೆ ತಲಾ ಲಕ್ಷ ರೂ.ಗಳ ದಂಡ

ದಾವಣಗೆರೆ (Davanagere) :  ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ ಇಬ್ಬರು ನಕಲಿ ವೈದ್ಯರಿಗೆ ‌  ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಲಾ  ಲಕ್ಷ…

By Dinamaana Kannada News

Davanagere | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ 

ಜಗಳೂರು : ಒಳ ಮೀಸಲಾತಿ ಜಾರಿಗೊಳಿಸಲು ಒತ್ತಾಯಿಸಿ   ಪಟ್ಟಣದಲ್ಲಿ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ತಾಲ್ಲೂಕು ಘಟಕದ…

By Dinamaana Kannada News

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

ದಾವಣಗೆರೆ (Davanagere) : ನಿತ್ಯ ಸೈಕಲ್ ಬಳಸುವುದರಿಂದ ಉತ್ತಮ ಪರಿಸರ, ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆಯ ಬೈಸಿಕಲ್ ಕ್ಲಬ್ ಸಹಯೋಗದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ ತಿರಂಗ್ ಸೈಕಲ್ ರ‍್ಯಾಲಿಯ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈಗ ಒಂದೊAದು ಮನೆಯಲ್ಲಿ 2 ರಿಂದ 3 ದ್ವಿಚಕ್ರ ವಾಹನಗಳಿರುತ್ತವೆ. ವಾಹನಗಳ ಹೊಗೆಯಿಂದ ಪರಿಸರ ಹಾಳಾಗುತ್ತದೆ. ಆದ್ದರಿಂದ ವಾರದಲ್ಲಿ ಒಂದು ದಿನವಾದರೂ ಸಹಾ ಸೈಕಲ್ ಬಳಸಿರಿ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಿಗೆ ಸೈಕಲ್ ಕಲಿಸಬೇಕು. ಕ್ವಿಟ್ ಇಂಡಿಯಾ ಕಾರ್ಯಕ್ರಮದಡಿ ಅತೀ ಕಡಿಮೆ ಅವಧಿಯಲ್ಲಿ ಇಂತಹ ಸೈಕಲ್ ರ‍್ಯಾಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಸೈಕಲ್ ರ‍್ಯಾಲಿ ಮೂಲಕ ಜಾಗೃತಿ ಕಾರ್ಯಕ್ರಮಗಳು ನಡೆಯಲಿ ಎಂದರು. ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಿಪಿಐ ನಲವಾಗಲು ಮಂಜುನಾಥ ಹೈಸ್ಕೂಲ್ ಮೈದಾನದಲ್ಲಿ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಎಂ.ಬಿ.ಅಶ್ವಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ  ಶ್ರೀಹರ್ಷ, ಪೊಲೀಸ್ ಇಲಾಖೆಯ ಅಧಿಕಾರಿ ಎಚ್.ಬಿ.ಸೋಮಶೇಖರಪ್ಪ, ಪೊಲೀಸ್ ಇನ್ಸ್ಪೆಕ್ಟರ್ ಮಲ್ಲಮ್ಮ ಚೌಬೆ, ಸಂಚಾರಿ ಪೊಲೀಸ್ ಮಹೇಂದ್ರ, ದಾವಣಗೆರೆ ಬೈಸಿಕಲ್ ಕ್ಲಬ್ ಅಧ್ಯಕ್ಷ ರಾಜೇಂದ್ರ ಪ್ರಸಾದ, ಕಾರ್ಯದರ್ಶಿ ಕೆ.ಎಸ್.ಮಹೇಶ, ಡಾ.ಸುರೇಶ, ಡಾ.ರಾಘವೇಂದ್ರ, ಡಾ.ಮಾಲತೇಶ, ಡಾ.ಸಂತೋಷ, ಕಿರಣ್, ನಾಗರಾಜ, ಹೇಮಂತ್ ಆರಾಧ್ಯ, ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ, ಹಾಗೂ ಪದಾಧಿಕಾರಿಗಳು ಇದ್ದರು.

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?