ದಾವಣಗೆರೆ, ಮಾ.31 : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಸ್ವೀಪ್ ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಚೇರಿ ಬಳಿಯಿಂದ ಭಾನುವಾರ ಆಯೋಜಿಸಿದ್ದ ಮತದಾರರ ಜಾಗೃತಿ ಮೂಡಿಸುವ ಬೈಕ್ ರ್ಯಾಲಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ ಇಟ್ನಾಳ್ ಚಾಲನೆ ನೀಡಿದರು.
ಜಾಥಾವು ಜಿಲ್ಲಾ ಪಂಚಾಯತ್‍ನಿಂದ ಹೊರಟು, ಜಯದೇವ ಸರ್ಕಲ್, ಪಿ.ಬಿ.ರಸ್ತೆಯ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅರುಣ ಸರ್ಕಲ್‍ನಲ್ಲಿ ಮುಕ್ತಾಯಗೊಂಡು ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ, ಬಿಸಿಎಂ ಅಧಿಕಾರಿ ಗಾಯತ್ರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
—