ದಾವಣಗೆರೆ (Davanagere): ಅಪಾಯಕಾರಿಯಾಗಿ ಮೋಟಾರ್ ಬೈಕ್‍ಗಳನ್ನು (ಬೈಕ್ ವೀಲಿಂಗ್) ಚಲಾಯಿಸಿದ ವಾಹನ ಸವಾರರ ಮೇಲೆ ಪ್ರಕರಣ ದಾಖಲು ಮಾಡಿ 05 ಬೈಕ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪ್ಪನ್ ಹುಸೈನ್, ಅಸೀಬ್, ಸೈಯದ್ ರೀಯಾನ್, ಮೊಹಮ್ಮದ್ ಅಪ್ಪು, ಮೊಹಮ್ಮದ್ ದಸ್ತಗೀರ್ ಚನ್ನಗಿರಿ ತಾ. ಶಾಂತಿಸಾಗರ ಬಳಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದ ಇವರ ವಿರುದ್ದ ಸೆಂಟ್ರಲ್ ಮೋಟಾರ್ ವೆಹಿಕಲ್ಸ್ ರೂಲ್ಸ್ ನಡಿ ಪ್ರಕರಣ ದಾಖಲು ಮಾಡಲಾಗಿದೆ.
ಬೈಕ್ ವೀಲಿಂಗ್ ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ (ಇನ್ಸ್ಟಾಗ್ರಾಂ) ಹರಿದಾಡಿದ್ದು ಈ ಬಗ್ಗೆ ಎಸ್ಪಿ ಉಮಾ ಪ್ರಶಾಂತ್ ಅವರು ಅಪಾಯಕಾರಿಯಾಗಿ ಬೈಕ್ ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಚೆರಣೆ ಮಾಡಲು ನಿರ್ದೇಶನ ನೀಡಿದ್ದು, ಈ ಸಂಬಂಧ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ ಸಂತೋಷ , ಜಿ ಮಂಜುನಾಥ ಹಾಗೂ ಚನ್ನಗಿರಿ ಪೊಲೀಸ್ ಉಪ ವಿಭಾಗದ ಸಹಾಯಕ ಪೊಲೀಸ್ ಉಪಾಧೀಕ್ಷಕ ಸ್ಯಾಮ್ ವರ್ಗೀಸ್ ರವರ ಮಾರ್ಗದರ್ಶನದಲ್ಲಿ ಸಂತೇಬೆನ್ನೂರು ಪೊಲೀಸ್ ವೃತ್ತ ನಿರೀಕ್ಷಕರಾದ ಲಿಂಗನಗೌಡ ನೆಗಳೂರು ರವರ ನೇತೃತ್ವದಲ್ಲಿ ಬಸವಾಪಟ್ಟಣ ಪಿಎಸ್‍ಐ ಹಾಗೂ ಸಿಬ್ಬಂದಿಗಳ ತಂಡ ಬೈಕ್ ವೀಲಿಂಗ್ ಮಾಡಿದವರು ಪ್ರಕರಣ ದಾಖಲಿಸಿ ಬೈಕ್ ವಶಕ್ಕೆ ಪಡೆದಿದ್ದಾರೆ.
Read also : ಶೋಷಿತರಿಗೆ “ಜಾತಿಗಣತಿ” ಜಾರಿಯಾಗಬೇಕು: ಜಿ. ಬಿ. ವಿನಯ್ ಕುಮಾರ್ ಅಭಿಮತ
ಸಾರ್ವಜನಿಕರ ಗಮನಕ್ಕೆ:
ಜಿಲ್ಲೆಯಲ್ಲಿ ಕೆಲವು ಕಡೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ಹಾಕಲು ಸಂಚಾರ ನಿಯಮಗಳ ಉಲ್ಲಂಘನೆ ಮಾಡಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದೆರೆಯುಂಟಾಗುವ ರೀತಿಯಲ್ಲಿ ಹಾಗೂ ತಮ್ಮ ಜೀವಕ್ಕೆ ಹಾನಿಯಾಗುವಂತೆ ವಾಹನ ಚಾಲನೆ ಮಾಡುವಂತ ಯುವಕರು ಕಂಡುಬಂದಿದ್ದು, ಅತೀವೇಗವಾಗಿ, ಹೆಲ್ಮೇಟ್ ಧರಿಸದೇ, ಚಾಲನ ಪರವಾನಿಗೆ ಇಲ್ಲದೇ, ಸಂಚಾರ ನಿಯಮಗಳನ್ನು ಪಾಲನೆ ಮಾಡದೇ ಸಂಚರಿಸುವ ಬೈಕ್ ಸವಾರರಿಗೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವತಿಯಿಂದ ಎಚ್ಚರಿಕೆ ನೀಡಿದೆ.