ದಾವಣಗೆರೆ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಸಮಾಜದ ವಿರೋಧಿ ಹೇಳಿಕೆ ನೀಡುವ ಮೂಲಕ ಸಮುದಾಯಗಳ ಮಧ್ಯ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಶಾಮನೂರು ರಸ್ತೆಯಿಂದ ಅಂಬೇಡ್ಕರ ವೃತ್ತದವರೆಗೆ ಕಪ್ಪು ಬಾವುಟ ಪ್ರದರ್ಶಿಸಿದರು. ಈ ವೇಳೆ ಅಂಬೇಡ್ಕರ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಡಿ.ಬಸವರಾಜ, ಸುಳ್ಳು ಮತ್ತು ದ್ವೇಷ ಭಾಷಣದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಕರ್ನಾಟಕಕ್ಕೆ ನೀಡಬೇಕಾದ ತೆರಿಗೆ ವಿಚಾರದಲ್ಲೂ ಸಹ ಮೋದಿ ಅವರು ಅನ್ಯಾಯವೇಸಗಿದ್ದಾರೆ. ಈ ನಿಟ್ಟಿನಲ್ಲಿ ಈ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದೇವೆ ಎಂದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಪಾಲಿಕೆ ಸದಸ್ಯರಾದ ಚಮನಸಾಬ್, ಎ.ನಾಗರಾಜ, ತಾಹೀರ್ ಸಮೀರ್,ರಹಮತ್ ಆಲಿ, ಗಿರಿಧರ್, ಸುರೇಶ್, ರೆಹಮಾನ್, ಹರ್ಷ, ಅಹಮದ್ ಸೇರಿದಂತೆ ಇತರರು ಇದ್ದರು