Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಡವರ ಬದುಕಿಗೆ ಬುಲ್ಡೋಜರ್ ದಾಳಿ: ಸರ್ಕಾರದ ನೀತಿಗೆ ಆಕ್ರೋಶ
ತಾಜಾ ಸುದ್ದಿ

ಬಡವರ ಬದುಕಿಗೆ ಬುಲ್ಡೋಜರ್ ದಾಳಿ: ಸರ್ಕಾರದ ನೀತಿಗೆ ಆಕ್ರೋಶ

Dinamaana Kannada News
Last updated: December 31, 2025 3:14 am
Dinamaana Kannada News
Share
Davanagere protest
SHARE
ದಾವಣಗೆರೆ : ಬೆಂಗಳೂರು ಉತ್ತರ ತಾಲೂಕಿನ ಕೋಗಿಲು ಲೇಔಟ್ ಪ್ರದೇಶದಲ್ಲಿ ಬಡವರ ಮನೆಗಳನ್ನು ಧ್ವಂಸಗೊಳಿಸಿ ನೂರಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿಸಿರುವ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ, ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ನಗರದ ಅಕ್ತರ್ ರಜಾ ಸರ್ಕಲ್ ಬಳಿ ಭಾರೀ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಅಧ್ಯಕ್ಷ  ಎ.ಆರ್. ತಾಹೀರ್, ಬೆಂಗಳೂರು ಫಕೀರ್ ಕಾಲೋನಿ, ವಸೀಂ ಲೇಔಟ್ ಹಾಗೂ ಕೋಗಿಲು ಬಡಾವಣೆಯ ಬಡವರ ಮನೆಗಳ ಮೇಲೆ ಯಾವುದೇ ಪೂರ್ವ ಸೂಚನೆ ನೀಡದೆ ಬುಲ್ಡೋಜರ್ ಚಲಾಯಿಸಿರುವುದು ಸರ್ಕಾರದ ಬಡವರ ವಿರೋಧಿ ಹಾಗೂ ಅಮಾನವೀಯ ನೀತಿಯ ಜೀವಂತ ಉದಾಹರಣೆಯಾಗಿದೆ ಎಂದು ಕಿಡಿಕಾರಿದರು.
ಇದು ಆಡಳಿತವಲ್ಲ, ಅಕ್ರಮ ದಾಳಿ. ಇದು ಕೇವಲ ಮಾನವೀಯ ವಿಫಲತೆ ಮಾತ್ರವಲ್ಲ, ಭಾರತದ ಸಂವಿಧಾನಕ್ಕೆ ಮಾಡಿದ ನೇರ ಅವಮಾನ” ಎಂದು ಅವರು ತೀವ್ರವಾಗಿ ಟೀಕಿಸಿದರು.
ಡಿಸೆಂಬರ್ 20ರ ಬೆಳಗಿನ ಜಾವ ಸುಮಾರು 4:15ಕ್ಕೆ ಯಾವುದೇ ಮುನ್ಸೂಚನೆ ನೀಡದೇ ಭೂಗರ್ಭ ಯಂತ್ರಗಳ ಮೂಲಕ ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಮನೆ ಖಾಲಿ ಮಾಡದಿದ್ದರೆ ಪರಿಣಾಮ ಎದುರಿಸಬೇಕೆಂದು ಬೆದರಿಕೆ ಹಾಕಲಾಗಿದೆ. ದಾಖಲೆಗಳು, ಹಣ ಹಾಗೂ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲು ಸಹ ಅವಕಾಶ ನೀಡಲಾಗಿಲ್ಲ. 30 ವರ್ಷಗಳಿಗೂ ಅಧಿಕ ಕಾಲ ಒಂದೇ ವಸಾಹತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಸುಮಾರು 400ಕ್ಕೂ ಹೆಚ್ಚು ಕುಟುಂಬಗಳನ್ನು ಯಾವುದೇ ಪರಿಹಾರ, ಪುನರ್ವಸತಿ ಅಥವಾ ಪರ್ಯಾಯ ವ್ಯವಸ್ಥೆ ಇಲ್ಲದೆ ಕಠಿಣ ಚಳಿಗಾಲದ ರಾತ್ರಿಗಳನ್ನು ತೆರೆದ ಆಕಾಶದ ಕೆಳಗೆ ಕಳೆಯುವ ಸ್ಥಿತಿಗೆ ತಳ್ಳಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ರಜ್ವಿ ರಿಯಾಝ್ ಅಹಮದ್ ಮಾತನಾಡುತ್ತಾ,  ಇನ್ಫೋಸಿಸ್ ಸಂಸ್ಥೆಗೆ ನೀಡಲಾಗಿದ್ದ 53.5 ಎಕರೆ KIADB ಭೂಮಿಯನ್ನು ರಿಯಲ್ ಎಸ್ಟೇಟ್ ಉದ್ದೇಶಕ್ಕೆ ದುರುಪ ಯೋಗಪಡಿಸಿ ಕೊಂಡಿರುವ ಗಂಭೀರ ಅಕ್ರಮದ ಕುರಿತು ಸರ್ಕಾರ ಸಂಪೂರ್ಣ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದರು.
Read also : ಹಿರಿಯ ನಾಗರಿಕರ ಗಮನಕ್ಕೆ:ಆಸ್ತಿ ರಕ್ಷಣೆ, ಮಾಸಿಕ ಪಿಂಚಣಿ ಮತ್ತು ಉಚಿತ ಕಾನೂನು ನೆರವು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್ ಮಾತನಾಡಿ, ಎಸ್‌ಡಿಪಿಐ ನಡೆಸಿದ ಹೋರಾಟ, ಪ್ರತಿಭಟನೆ ಹಾಗೂ ಜನಪರ ಒತ್ತಡದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ಲೇಔಟ್ ಧ್ವಂಸದಿಂದ ನಿರಾಶ್ರಿತರಾದ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದಾರೆ. ಇದನ್ನು ಎಸ್‌ಡಿಪಿಐ ಸ್ವಾಗತಿಸುತ್ತದೆ. ಆದರೆ ಭರವಸೆಗಳ ಮೇಲೆ ಬದುಕು ಕಟ್ಟಲಾಗುವುದಿಲ್ಲ. ಜನರಿಗೆ ಬೇಕಾಗಿರುವುದು ತಕ್ಷಣದ ಪರಿಹಾರ, ಸಮರ್ಪಕ ಪುನರ್ವಸತಿ ಹಾಗೂ ಶಾಶ್ವತ ಮನೆಗಳು. ಈ ಭರವಸೆ ಕೇವಲ ಹೇಳಿಕೆಯಾಗದೆ ತಕ್ಷಣ ಕಾರ್ಯರೂಪಕ್ಕೆ ಬರಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೋಶಾಧಿಕಾರಿ ಮೊಹಮ್ಮದ್ ಅಜರುದ್ದೀನ್, ಜಿಲ್ಲಾ ಸಮಿತಿ ಸದಸ್ಯರಾದ ಯಹಿಯ, ಸೈಯದ್ ರೆಹಮಾನ್ ಸಾಬ್, ಫಯಾಜ್ ಬೇಗ್, ಜಬಿ ಆಝಾದ್ ನಗರ, ಎಸ್ ಡಿ ಪಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಏಜಾಜ್ ಅಹಮದ್, ಹರಿಹರ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮಿ ಮುಜವರ್, ಕಾರ್ಯಕರ್ತರು ಮತ್ತು ಬೆಂಬಲಿಗರು ಉಪಸ್ಥಿತರಿದ್ದರು.
job news dinamaana ads
TAGGED:Davanagere Newsdinamaana.comKannada NewsSDPIಎಸ್‌ಡಿಪಿಐಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mahavira M. Karennavara ಹಿರಿಯ ನಾಗರಿಕರ ಗಮನಕ್ಕೆ:ಆಸ್ತಿ ರಕ್ಷಣೆ, ಮಾಸಿಕ ಪಿಂಚಣಿ ಮತ್ತು ಉಚಿತ ಕಾನೂನು ನೆರವು ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
Next Article Davanagere ಸಿರಿಧಾನ್ಯ ಪಾಕಗಳು ಬಾಯಲ್ಲಿ ನೀರೂರಿಸಿದವು:ಗಿತ್ತೆ ಮಾಧವ ವಿಠ್ಠಲ್‍ರಾವ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಚರಂಡಿ ಹೂಳು ತೆಗೆಸುವಂತೆ ಪಾಲಿಕೆ ಆಯುಕ್ತರಿಗೆ ಎಸ್‍ಡಿಪಿಐ ಮನವಿ

ದಾವಣಗೆರೆ (Davanagere):  ಚರಂಡಿಗಳಿಗೆ ಸ್ಲಾಬ್ ಅಳವಡಿಸಬೇಕು, ಚರಂಡಿಯಲ್ಲಿ ತುಂಬಿಕೊಂಡಿರುವ ಹೂಳು ತೆಗೆಸುವ ಮೂಲಕ ಜನರ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಸೋಶಿಯಲ್…

By Dinamaana Kannada News

ದಾವಣಗೆರೆ|ದಸರಾ ಹಬ್ಬದಲ್ಲಿ ಸಂವಿಧಾನ ಬಾಹಿರ ಘೋಷಣೆ ಆರೋಪ: ಕ್ರಮಕ್ಕೆ ಎಸ್ಪಿಗೆ ಮನವಿ

ದಾವಣಗೆರೆ: ದಸರಾ ಹಬ್ಬದ ಪ್ರಯುಕ್ತ ನಡೆಸಿದ ಬೈಕ್ ರ್ಯಾಲಿಯಲ್ಲಿ ಸಂವಿಧಾನ ಬಾಹಿರ ಘೋಷಣೆ ಕೂಗಲಾಗಿದ್ದು, ಕೂಡಲೇ ಕ್ರಮ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾ ಪೊಲೀಸ್…

By Dinamaana Kannada News

Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು

ದಾವಣಗೆರೆ ನ.16 (Davanagere) : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?