ದಾವಣಗೆರೆ: ಲಾಭಾಂಶದ ಆಸೆಗೆ ಮರುಳಾದ ವ್ಯಾಪಾರಿಯೊಬ್ಬರು ವಂಚನೆಗೆ ಒಳಗಾಗಿ 39.36 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ.
ಹೊನ್ನಾಳಿ ತಾಲ್ಲೂಕಿನ ಸಾಸ್ಟೆಹಳ್ಳಿಯ ಬಟ್ಟೆ ವ್ಯಾಪಾರಿ ಆನ್‌ಲೈನ್ ಮೂಲಕ ಹಣ ಕಳೆದುಕೊಂಡವರು. ‘ವಾಟ್ಸ್‌ಆ್ಯಪ್ ಮೂಲಕ ಸಂಪರ್ಕ ಸಾಧಿಸಿದ್ದ ಅಪರಿಚಿತರು,
ಆನ್‌ಲೈನ್‌ನಲ್ಲಿ ಟಾಸ್ಕ್ ಕಂಪ್ಲಿಟ್ ಮಾಡಿದರೆ ಲಾಭಾಂಶ ನೀಡುವುದಾಗಿ ಆಸೆ ತೋರಿಸಿದ್ದರು. ಆರಂಭದಲ್ಲಿ ಅವರು ಸೂಚಿಸಿದ ಟಾಸ್ಕ್ ಕಂಪ್ಲಿಟ್ ಮಾಡಿದ್ದಕ್ಕೆ ಲಾಭಾಂಶವನ್ನೂ ನೀಡಿದ್ದರು.
ಬಳಿಕ ಟಾಸ್ಕ್ ವೇಳೆ ಅವರು ಸೂಚಿಸಿದ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ಮೋಸ ಎಸಗಿದ್ದಾರೆ’ ಎಂದು ಹಣ ಕಳೆದುಕೊಂಡ ವ್ಯಕ್ತಿ ಇಲ್ಲಿನ ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
