Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು
ತಾಜಾ ಸುದ್ದಿ

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು

Dinamaana Kannada News
Last updated: March 11, 2024 12:27 pm
Dinamaana Kannada News
Share
siddaramaya
The poor of all castes, all religions are entitled to guarantee schemes
SHARE

ದೇವನಹಳ್ಳಿ ಮಾ 11:
ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ

ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ ಮುಗಿದು ಕೇಳಿದರು.
ಆದರೆ ಮೋದಿಯವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಣ ಹಾಕ್ತೀವಿ ಅಂದರು. ಮೋದಿಯವರು ಈ ಹಣ ಹಾಕಿದ್ರಾ ನಿಮ್ಮ ಖಾತೆಗೆ? ವಿದೇಶದಿಂದ ಕಪ್ಪು ಹಣ ತಂದರಾ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದರು.
ಅಚ್ಚೆದಿನ್ ಆಯೆಗಾ ಎಂದು ಡೈಲಾಗ್ ಹೊಡೆದದ್ದು ಮೋದಿಯವರು. ಆದರೆ ಪೆಟ್ರೋಲ್, ಡೀಸೆಲ್ ಬೆಲೆ, ಗ್ಯಾಸ್ ಬೆಲೆ, ರಸಗೊಬ್ಬರದ ಬೆಲೆ ಎಲ್ಲಾ ಏರಿಸಿ ಏರಿಸಿ ಬಡವರ, ಮಧ್ಯಮ ವರ್ಗದವರು ಬದುಕುವುದೇ ದುಸ್ತರ ಮಾಡಿಬಿಟ್ಟರು ಎಂದು ಒಂದೊಂದಾಗಿ ವಿವರಿಸಿದರು.

ಬಿಜೆಪಿ ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು

ಬಿಜೆಪಿ ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿಯ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ಕಾಂಗ್ರೆಸ್ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಅವಮಾನಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸಿ ಅವರ ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ. ಬಿಜೆಪಿಯ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗ್ಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಇವರು ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ಮೋದಿಯವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನ ಹೋದರೆ ನಾಡಿನ ಜನರ ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಎಚ್ಚರಿಸಿದರು.

ಮೊನ್ನೆ ನಡೆದ ವಿಧಾನಪರಿಷತ್ ಚುನಾವಣೆ ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಭಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಖಚಿತವಾಗಿ ನುಡಿದರು.

ಮಾದರಿ ದೇವನಹಳ್ಳಿ

ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹಿಡಿದ ಕೆಲಸ ಬಿಡುವವರಲ್ಲ. ದೇವನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಅವರು ದೇವನಹಳ್ಳಿ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೆಡಿ ಮಾಡಿಕೊಂಡು ಬಂದಿದ್ದಾರೆ. ಅದೆಲ್ಲಕ್ಕೂ ಹಣ ಬಿಡುಗಡೆ ಮಾಡಲಾಗುವುದು, ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ನೇಕಾರರ ಬಹುವರ್ಷಗಳ ಬೇಡಿಕೆಗಳನ್ನು ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ಯಾರು ನಿಮ್ಮ ಬದುಕಿನ ಪರವಾಗಿ ಇದ್ದಾರೋ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿ ಪಕ್ಷದ ಶಾಸಕರು ಮತ್ತು ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

TAGGED:CM Siddaramaiahdinmana.com. Davangere newsದಿನಮಾನ.ಕಾಂ.ದಾವಣಗೆರೆ ಸುದ್ದಿಸಿಎಂ ಸಿದ್ದರಾಮಯ್ಯ
Share This Article
Twitter Email Copy Link Print
Previous Article cm siddaramaya ಹೆಗಡೆಯವರ ಅಭಿಪ್ರಾಯಕ್ಕೆ ಪ್ರಧಾನಿಗಳ ಒಪ್ಪಿಗೆ ಇಲ್ಲದಿದ್ದರೆ ಅವರನ್ನು ಪಕ್ಷದಿಂದ ವಜಾ ಮಾಡಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು  
Next Article ssm ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸಕ್ಕೆ ಆನಂದಸ್ವಾಮಿ ಗಡ್ಡದೇವರ ಮಠ  ಭೇಟಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬೀಜ, ಗೊಬ್ಬರ ಕೃತಕ ಅಭಾವ ಆರೋಪ: ದಾಸ್ತಾನು ಗೋದಾಮುಗೆ ಶಾಸಕ ಬಸವಂತಪ್ಪ ಭೇಟಿ

ದಾವಣಗೆರೆ:  ಜಿಲ್ಲೆಯಲ್ಲಿ ಮುಂಗಾರು ಮಳೆ ಸುರಿಯುತ್ತಿದೆ. ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಅಧಿಕಾರಿಗಳು ಬೀಜ, ಗೊಬ್ಬರ ರೈತರಿಗೆ ಸಮರ್ಪಕವಾಗಿ…

By Dinamaana Kannada News

Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

ದಾವಣಗೆರೆ,ಅ. 29  (Davanagere): ಆಯುರ್ವೇದ  ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ ದೀರ್ಘಾಯುಷ್ಯ ಸಾಧ್ಯ ಎಂದು ವಿರಕ್ತಮಠದ ಡಾ; ಬಸವಪ್ರಭು ಸ್ವಾಮೀಜಿ ತಿಳಿಸಿದರು.…

By Dinamaana Kannada News

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಧರಣಿ

ದಾವಣಗೆರೆ (Davanagere): ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ದಾವಣಗೆರೆ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ (ಎಚ್‍ಕೆಆರ್ ಬಣ)ದ…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?