ದಾವಣಗೆರೆ (Davangere district ) : ಖಾಸಗಿ ಶಾಲೆಗಳ ಪೈಪೋಟಿ ಎದುರಿಸಲು ಸರಕಾರಿ ಶಾಲೆಗಳಲ್ಲಿ ಸೌಲಭ್ಯ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸರಕಾರದ ಜೊತೆಗೆ ಶಿಕ್ಷಕರು ಹಾಗೂ ಸಾರ್ವಜನಿಕರೂ ಕೈಜೋಡಿಸಲು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ (Canara Bank Employees Union)
ನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಕರೆ ನೀಡಿದರು.
ನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಕರೆ ನೀಡಿದರು.
ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ “ಸಾಮಾಜಿಕ ಕಳಕಳಿ” ಕಾರ್ಯಕ್ರಮದಡಿ ಬ್ಯಾಂಕ್ ರಾಷ್ಟ್ರೀಕರಣದ 56 ನೇ ದಿನಾಚರಣೆಯ ಅಂಗವಾಗಿ ದಾವಣಗೆರೆ ತಾಲೂಕಿನ ತುರ್ಚಘಟ್ಟ (Turchaghatta) ದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳು ಕುಳಿತುಕೊಳ್ಳುವ ಕುರ್ಚಿಗಳನ್ನು ಕೊಡುಗೆ ನೀಡಿ ಮಾತನಾಡುತ್ತಿದ್ದರು.
ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಸರಕಾರ ಮುಂದಾಗಬೇಕು (Canara Bank Employees Union)
ಸರಕಾರಿ ಕನ್ನಡ ಶಾಲೆಗಳು ನಮ್ಮ ನಾಡಿನ ಹೆಮ್ಮೆ. ಅವುಗಳಲ್ಲಿ ಕಲಿತವರು ಅದೆಷ್ಟೋ ವಿದ್ಯಾರ್ಥಿಗಳು ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ಕಲೆ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮೆರೆದಿದ್ದಾರೆ. ಆದ್ದರಿಂದ ಖಾಸಗಿ ಶಾಲೆಗಳಿಗೆ ಅನಗತ್ಯ ಪ್ರೋತ್ಸಾಹ ನೀಡುವುದನ್ನು ಬಿಟ್ಟು ಸರಕಾರಿ ಶಾಲೆಗಳನ್ನು ಸಬಲೀಕರಣ ಮಾಡಲು ಸರಕಾರ ಮುಂದಾಗಬೇಕು ಎಂದರು.
ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು Canara Bank Employees Union)
ಕೆನರಾ ಬ್ಯಾಂಕ್ ನಿವೃತ್ತ ನೌಕರರ ಸಂಘದ ಪ್ರಾದೇಶಿಕ ಕಾರ್ಯದರ್ಶಿ ಹೆಚ್.ಸುಗುರಪ್ಪ ಮಾತನಾಡಿ. ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಬೇಕು. ದುಃಸ್ಥಿತಿಯಲ್ಲಿರುವ ಸರಕಾರಿ ಕನ್ನಡ ಶಾಲೆಗಳನ್ನು ಸರಕಾರವು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು ಎಂದರು.
ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಮಾತನಾಡಿ, ಕೆನರಾ ಬ್ಯಾಂಕ್ ನೌಕರರ ಸಂಘದ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ನಮ್ಮೊಂದಿಗೆ ಸಹಕರಿಸಲು ಮನವಿ ಮಾಡಿದರು.
ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಮಿತಿ ಸದಸ್ಯರುಗಳಾದ ಕೆ.ವಿಶ್ವನಾಥ್ ಬಿಲ್ಲವ, ಆರ್.ಆಂಜನೇಯ ಸಿ.ಪರಶುರಾಮ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ, ಮಾಜಿ ಅಧ್ಯಕ್ಷ ಅಜಿತ್ ಕುಮಾರ್ ನ್ಯಾಮತಿ, ಜಂಟಿ ಕಾರ್ಯದರ್ಶಿ ಅಣ್ಣಪ್ಪ ನಂದಾ, ಕೆನರಾ ಬ್ಯಾಂಕ್ ನೌಕರರ ಸಂಘದ ಚಾಂದ್ ಬಾಷಾ, ಡಿ.ಹರ್ಷದ್, ನಾಗರತ್ನಮ್ಮ, ಎಂ.ಆರ್. ಪವನ್, ಪವನ್ ಕುಮಾರ್, ಅಶ್ವಿನಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹನುಮಂತಪ್ಪ ಹಾಗೂ ಶಾಲೆಯ ಶಿಕ್ಷಕರಾದ ವಿ.ಎಂ.ವಿರುಪಾಕ್ಷಯ್ಯ, ಕೆ.ವೀಣಾ, ಎನ್.ಸಿ.ಸುಮಿತ್ರಾ, ಆಶಾರಾಣಿ, ಕಾವ್ಯ, ಮಂಜಮ್ಮ ಕೊಟಿಗಿ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.