Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೋಷಣ್ ಮಾಸಾಚರಣೆ|ಪೌಷ್ಠಿಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ :ನ್ಯಾ.ಮಹಾವೀರ ಮ ಕರೆಣ್ಣವರ
ತಾಜಾ ಸುದ್ದಿ

ಪೋಷಣ್ ಮಾಸಾಚರಣೆ|ಪೌಷ್ಠಿಕಾಂಶ ಆಹಾರ ಸೇವನೆಗೆ ಆದ್ಯತೆ ನೀಡಿ :ನ್ಯಾ.ಮಹಾವೀರ ಮ ಕರೆಣ್ಣವರ

Dinamaana Kannada News
Last updated: September 18, 2025 4:00 pm
Dinamaana Kannada News
Share
Davanagere
SHARE
ದಾವಣಗೆರೆ ಸೆ.18: ಪೌಷ್ಠಿಕ ಆಹಾರ ತಯಾರಿಕೆಯು ತಾಯಂದಿರ ಜವಾಬ್ದಾರಿಯಾಗಿದ್ದು ಇಡೀ ಕುಟುಂಬ ಅವರು ತಯಾರಿಸುವ ಪೌಷ್ಠಿಕ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಆದ್ದರಿಂದ ಬೀದಿ ಬದಿಯ ಜಂಕ್ ಫುಡ್ ತಿನ್ನುವುದರ ಬದಲಾಗಿ ಪೌಷ್ಠಿಕತೆಯುಕ್ತ ಆಹಾರ ಸೇವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ ಕರೆಣ್ಣವರ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಇವರ ಸಹಯೋಗದಲಿ ಇತ್ತೀಚೆಗೆ ನಗರದ ಕುವೆಂಪು ಕನ್ನಡ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡುವುದರ ಜೊತೆಗೆ ನಿಸರ್ಗದಲ್ಲಿ ಕಾಲಕಾಲಕ್ಕೆ ದೊರೆಯುವ ಹಣ್ಣು -ತರಕಾರಿ ಸೇವಿಸಬೇಕು. ಇದರಿಂದ ರೋಗ ನಿರೋಧಕ ಶಕ್ತಿಯು ಹೆಚ್ಚುವುದಲ್ಲದೆ, ರೋಗಗಳು ಕಾಣಿಸಿಕೊಂಡಾಗಲೂ ಬೇಗ ಗುಣಮುಖರಾಗಲು ಸಾಧ್ಯವಿದೆ ಎಂದ ಅವರು, ಊಟದ ವಿಷಯದಲ್ಲಿ ಗಂಡು ಹೆಣ್ಣು ಎಂದು ತಾರತಮ್ಯ ಮಾಡದೆ ಎಲ್ಲರೂ ಸರಿಯಾದ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಆಹಾರ ಪದಾರ್ಥ ಸೇವಿಸಬೇಕು ಎಂದರು.
Read also : ಹರಿಹರ|ರೈತರೊಂದಿಗೆ ಅನುಚಿತ ವರ್ತನೆ : ಪ್ರತಿಭಟನೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಅಪೌಷ್ಠಿಕತೆಯಿಂದಾಗಿ ಹಲವಾರು ಅನಾರೋಗ್ಯದ ಪರಿಸ್ಥಿತಿಗಳು ಉದ್ಭವಿಸಿ, ವಯಸ್ಸು ಹಾಗೂ ಲಿಂಗದ ಭೇದವಿಲ್ಲದೆ ಎಲ್ಲರೂ ಸಂಕಷ್ಟಕ್ಕೆ ಒಳಗಾಗುತ್ತಾರೆ. ಗರ್ಭಿಣಿ ಮಹಿಳೆಯರು ಪೌಷ್ಠಿಕ, ಗುಣಮಟ್ಟದ ಆಹಾರ ಸೇವನೆ ಮಾಡಬೇಕು. ಇದರಿಂದ ಹುಟ್ಟುವ ಮಗುವಿನ ಆರೋಗ್ಯ ಹಾಗೂ ಪೌಷ್ಠಿಕ ಮಟ್ಟ ನಿರ್ಧಾರವಾಗುತ್ತದೆ. ರಕ್ತ ಹೀನತೆಯು ಗರ್ಭಿಣಿ, ಬಾಣಂತಿ ಹಾಗೂ ಕಿಶೋರಿಯರಲ್ಲಿ ಒಂದು ಜ್ವಲಂತ ಸಮಸ್ಯೆಯಾಗಿದ್ದು, ಪ್ರತಿ ದಿನ ಸಮತೋಲನ ಪೌಷ್ಠಿಕತೆ ಆಹಾರವನ್ನು ಸೇವಿಸುವುದರಿಂದ ಮಾತ್ರ ಪರಿಣಾಮಕಾರಿಯಾಗಿ ರಕ್ತ ಹೀನತೆಯನ್ನು ತಡೆಗಟ್ಟುವುದರ ಜೊತೆಗೆ ಆರೋಗ್ಯ ವೃದ್ಧಿಸಿಕೊಳ್ಳಬಹುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಮಾತನಾಡಿ, ಗರ್ಭಿಣಿ ಬಾಣಂತಿ ಮತ್ತು ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು. ಮಕ್ಕಳ ಪಾಲನೆ, ಪೋಷಣೆ ಮೇಲೆ ಹೆಚ್ಚು ಗಮನಹರಿಸಬೇಕು. ಮಕ್ಕಳ ರಕ್ಷಣೆ ಮತ್ತು ಆರೋಗ್ಯಕರವಾದ ಜೀವನ ನಡೆಸಬೇಕೆಂದು ತಿಳಿಸಿದರು.
ಹೊನ್ನೂರು ಪ್ರಾಥಮಿಕ ವೈದ್ಯಾಧಿಕಾರಿ ಡಾ.ಎಂ.ಕೆ.ತೃಪ್ತಿ ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ. ದೇವರಾಜ್ ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಎಸ್.ಅಭಿಕುಮಾರ್,. ಮೇಲ್ವಿಚಾರಕರಾದ ವಿದ್ಯಾ, ಹೆಚ್.ಕವಿತಾ ಹಾಗೂ ಕಛೇರಿಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಎಲ್ಲಾ ಸಿಬ್ಬಂದಿ ವರ್ಗದವರು ಇದ್ದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article harihara ಹರಿಹರ|ರೈತರೊಂದಿಗೆ ಅನುಚಿತ ವರ್ತನೆ : ಪ್ರತಿಭಟನೆ
Next Article Applications invited ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ಮಾಲಿಕರಿಗೆ ಭಾರಿ ದಂಡ : ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ  ಆಗಸ್ಟ್ 8: ರಸ್ತೆ ಅಪಘಾತಗಳು ಸಂಭವಿಸಬಾರದು, ಇದಕ್ಕಾಗಿ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆಕಸ್ಮಿಕ ಅಪಘಾತಗಳಿಂದ ಜೀವಹಾನಿ…

By Dinamaana Kannada News

Political analysis | ಸಿದ್ದು ದಿಲ್ಲಿಯಲ್ಲಿ  ಬಾಂಬ್ ಬ್ಲಾಸ್ಟ್ ಮಾಡಿದ್ದೇಕೆ?

ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲ ಕೆಲ ದಿನಗಳ ಹಿಂದೆ ಸಿಎಂ ಸಿದ್ಧರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ.…

By Dinamaana Kannada News

ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನ; ನಂತ್ರ ನಡೆದ ಘಟನೆಯಿಂದ ಕಳ್ಳರು ಕಕ್ಕಬಿಕ್ಕಿ

ದಾವಣಗೆರೆ : ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ  ಕಳ್ಳರು ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಯತ್ನಿಸಿದ ವೇಳೆ ಶಾರ್ಟ್ ಸಕ್ರ್ಯೂಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?