ದಾವಣಗೆರೆ : ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟಿçಯ ವಾಣಿಜ್ಯ ಮೇಳ – 2026 ರ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ “ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯ ವತಿಯಿಂದ ಡಿಸೆಂಬರ್ 31 ರಂದು ಬೆಳಿಗ್ಗೆ 11.00 ಗಂಟೆಗೆ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ದಾವಣಗೆರೆ ಆವರಣದಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಹಾಗೂ ಕೃಷಿ ಇಲಾಖೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುತ್ತದೆ.
ಒಟ್ಟು ಮೂರು ವಿಭಾಗದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸಿಹಿ ಮತ್ತು ಖಾರದ ಖಾದ್ಯವನ್ನು ಸಿರಿಧಾನ್ಯಗಳಾದ ಜೋಳ, ರಾಗಿ, ನವಣೆ, ಸಜ್ಜೆ, ಹಾರಕ, ಬರಗು, ಊದಲು, ಕೊರಲೆ ಮತ್ತು ಸಾಮೆ ಬೆಳೆಗಳಿಂದ ತಯಾರಿಸುವುದು. ಮರೆತು ಹೋದ ಖಾದ್ಯಗಳನ್ನು ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳು ಎಂದು ಕರೆಯಲ್ಪಡುವ, ದೇಸಿ ತಳಿಗಳಿಂದ (ಸಿರಿಧಾನ್ಯಗಳನ್ನು ಹೊರತು ಪಡಿಸಿ ಇತರೆ ದೇಸಿ ತಳಿಗಳಡಿ ಬರುವ ಆಹಾರ ಮತ್ತು ಎಣ್ಣೆಕಾಳು ಬೆಳೆಗಳ, ತರಕಾರಿ ಮತ್ತು ಹಣ್ಣುಗಳು ಇತ್ಯಾದಿ) ಖಾದ್ಯಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಲು ಅವಕಾಶವಿರುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಡಿಸೆಂಬರ್ 21 ರೊಳಗೆ ತಮ್ಮ ಹೆಸರು, ವಿಳಾಸ, ಭಾಗವಹಿಸುವ ವಿಭಾಗ (ಸಿಹಿ, ಖಾರ, ಮರೆತು ಹೋದ ಖಾದ್ಯ)ವನ್ನು ಮೋ: 8277928938 ಮೊಬೈಲ್ ಸಂಖ್ಯೆಗೆ ಕಳುಹಿಸಿ ನೋಂದಾಯಿಸಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು (ರೈ.ಮ) ಮೊಬೈಲ್ ಸಂಖ್ಯೆ 8277928938 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
