Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ
ತಾಜಾ ಸುದ್ದಿ

ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

Dinamaana Kannada News
Last updated: October 31, 2024 12:15 pm
Dinamaana Kannada News
Share
Chief Minister Siddaramaiah
Chief Minister Siddaramaiah
SHARE

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು 3 ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ.

ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು.

READ ALSO  : Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ
Next Article DAVANAGERE Davanagere | ಅಭಿವೃದ್ಧಿ ಕೆಲಸಗಳು ಮಾತನಾಡಲಿ : ಶಾಸಕ ಕೆ.ಎಸ್.ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಯುವಕನ ಕೊಲೆ : ಮೂವರು ಆರೋಪಿಗಳ ಸೆರೆ

ದಾವಣಗೆರೆ (Davanagere): ಸಹೋದರಿಯನ್ನು ಚುಡಾಯಿಸಿದ ಎಂಬ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿದ್ದ ಮೂವರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.…

By Dinamaana Kannada News

ಪಂಚಮಸಾಲಿ ಸಮಾಜದ ಪ್ರತ್ಯೇಕ ಸಭೆಗಳು ರದ್ದು : ಮಾಜಿ ಶಾಸಕ ಎಚ್.ಎಸ್.ಶಿವಶಂಕರ್

ದಾವಣಗೆರೆ (Davanagere): ಪಂಚಮಸಾಲಿ ಸಮಾಜದ ಮುಖಂಡ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ನಂತರ…

By Dinamaana Kannada News

ಅಧಿಕಾರಕ್ಕೆ ಪಲಾಯನ ಮಾಡುವ ನಿತೀಶ್ ಕುಮಾರ್ ಗೆ ತಕ್ಕ ಪಾಠ ಕಲಿಸಿ: ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ಬಿಹಾರ ಸಿಎಂ ನಿತೀಶ್ ಕುಮಾರ್ ಯಾವಾಗಲೂ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುತ್ತಾರೆ. ಹಾಗಾಗಿ, ಬಿಹಾರ ಕಾಂಗ್ರೆಸ್ ಆಯೋಜಿಸಿರುವ ಪಲಾಯನ್…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?