Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ
ತಾಜಾ ಸುದ್ದಿ

ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಸರ್ಕಾರದ ಉದ್ದೇಶ : ಸಿದ್ದರಾಮಯ್ಯ

Dinamaana Kannada News
Last updated: January 10, 2025 5:18 pm
Dinamaana Kannada News
Share
Chief Minister Siddaramaiah
Chief Minister Siddaramaiah
SHARE
ಮೈಸೂರು, ಜ. 10 : ನಕ್ಸಲಿಂ ನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ  ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ.
ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.
ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ
ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.
ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ
ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ,ಡಾ.ಅಂಬೇಡ್ಕರ್  ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು.
ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.
ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ : 
ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ  ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.
ಆಶಾ ಕಾರ್ಯಕರ್ತರಿಗೆ 10,000 ರೂ. ಮಾಹೆಯಾನ
ಆಶಾ ಕಾರ್ಯಕರ್ತರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.
ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ 
ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.
ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ  ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್  ನ್ನು ತಾನು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
Read also : ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ 
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ : ಪ್ರೊ.ಸುಚಿತ್ರಾ.
Next Article Davanagere ಎಸ್.ಎಸ್ ಹೈಟೆಕ್ ಆಸ್ಪತ್ರೆ ಬಳಿಯ ಕೆಳಸೇತುವೆ ಪರಿಶೀಲನೆ : ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳೊಂದಿಗೆ ಸಂಸದರ ಚರ್ಚೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಕುಮಾರಣ್ಣ ಒಪ್ಪಿದ್ರೂ ಯೋಗಿ ಒಪ್ತಿಲ್ಲ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.ಈ ಸಂದರ್ಭದಲ್ಲಿ…

By Dinamaana Kannada News

ಸರ್ಕಾರಿ ಐಟಿಐ ಕಾಲೇಜಿನಿಂದ ಚುನಾವಣಾ ಮತದಾನ ಜಾಥಾ

ದಾವಣಗೆರೆ :  ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಅವರು ಮತದಾನ…

By Dinamaana Kannada News

Davanagere : ಟ್ರಾಕ್ಟ್‌ರಗಳಿಗೆ ಕೇಜ್ ವ್ಹೀಲ್ ಹಾಕಿ ರಸ್ತೆಗೆ ಇಳಿದರೆ ಕ್ರಮ : ಜೆ.ಸಂಜೀವ್ ಕುಮಾರ್

ದಾವಣಗೆರೆ  (Davanagere): ಗ್ರಾಮೀಣ ಭಾಗದಲ್ಲಿ ಟ್ರಾಕ್ಟ್‌ರಗಳಿಗೆ  ಕೇಜ್ ವ್ಹೀಲ್ ಹಾಕಿಕೊಂಡು ಸಾರ್ವಜನಿಕ ರಸ್ತೆಗಳನ್ನು ಹಾಳುಮಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿರುವ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?