Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davangere | ಜಿಲ್ಲಾ ಆಸ್ಪತ್ರೆ ಶಿಥಿಲ ಕಟ್ಟಡ ವೀಕ್ಷಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: December 22, 2024 10:22 am
Dinamaana Kannada News
Share
Davanagere
Davanagere
SHARE

ದಾವಣಗೆರೆ  (Davangere):  ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಈಚೆಗೆ ಮೇಲ್ಚಾವಣಿಯ ಪದರು ಕಳಚಿ ಬಿದ್ದು ಮೂವರು ಗಾಯಗೊಂಡ ಹಿನ್ನೆಲೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಡಿ.17  ರಂದು ಆಸ್ಪತ್ರೆಯ ಮೇಲ್ಚಾವಣಿಯ ಪದರು ಕಳಚಿ ಬಿದ್ದು, ವಿಜಯನಗರ ಜಿಲ್ಲೆ, ಹರಪನಹಳ್ಳಿ ತಾಲೂಕಿನ ಹಲವಾಗಲು ಗ್ರಾಮದ ಕಾವೇರಿ, ಪ್ರೇಮಾ ಹಾಗೂ ಎರಡೂವರೆ ವರ್ಷದ ಮಗು ಗಾಯಗೊಂಡಿದ್ದರು. ಅಲ್ಲದೇ ಕಳೆದ ಮಾರ್ಚ್ ತಿಂಗಳಲ್ಲಿ ಇದೇ ರೀತಿ ಪದರು ಕಳಚಿ ಬಿದ್ದು ವಾರ್ಡ್ ನಂಬರ್ 72 ರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುನಾಥ್ ಎಂಬ ರೋಗಿ ಗಾಯಗೊಂಡಿದ್ದರು.

ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಕಟ್ಟಡ ಶಿಥಿಲಗೊಂಡು ಆಸ್ಪತ್ರೆಗೆ ದಾಖಲಾಗುವ ರೋಗಿಗಳು ಜೀವ ಭಯದಲ್ಲಿ ಚಿಕಿತ್ಸೆ ಪಡೆಯುವಂತಾಗಿದೆ ಎಂದು ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡಿತ್ತು.

ಈ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಆಸ್ಪತ್ರೆಯ ಕಟ್ಟಡವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈಚೆಗೆ ದಾವಣಗೆರೆಗೆ ಆಗಮಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ತಾವು ಹೊಸ ಕಟ್ಟಡ ನಿರ್ಮಿಸುವಂತೆ ಮನವಿ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಡ ಹಾಕುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಸರ್ಜನ್ ನಾಗೇಂದ್ರಪ್ಪ ಅವರೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಆಸ್ಪತ್ರೆಯ ಕಟ್ಟಡ ಹಾಗೂ ವಾರ್ಡ್ಗಳಲ್ಲಿ ಎಲ್ಲಿಲ್ಲಿ ಪದರುಗಳು ಕಳಚಿ ಬೀಳುವಂತಹ ಸ್ಥಿತಿಯಲ್ಲಿವೆ. ಅವುಗಳನ್ನು ಗುರುತಿಸಿ ತಾತ್ಕಾಲಿಕವಾಗಿ ತೆರವುಗೊಳಿಸಲು ಸಂಬAಧಪಟ್ಟ ಇಂಜಿನಿಯರ್‌ಗೆ ಸೂಚನೆ ನೀಡಿದರು. ಹೊಸ ನಿರ್ಮಾಣಕ್ಕೆ ತಾವು ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕೆಂದು ತಾಕೀತು ಮಾಡಿದರು.

ಈ ವೇಳೆ ಕೆಲವು ಅಧಿಕಾರಿಗಳು ಭಾಗವಹಿಸಿದ್ದರು.

Read also : ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಆರ್‌ಟಿಎಫ್ ಮುಖ್ಯಪೇದೆ ಟಿ.ಶಿವಾನಂದಗೆ ‘ರೈಲು ಸೇವಾ ಪುರಸ್ಕಾರ’
Next Article Davangere MP Dr. Prabha Mallikarjun DAVANAGERE | ವಿದ್ಯಾರ್ಥಿಗಳಿಗೆ ದಾವಣಗೆರೆಯಲ್ಲಿಯೇ ಉದ್ಯೋಗ ಆಧಾರಿತ ತರಬೇತಿ ನೀಡಲು ಸಂಸದರ ದಿಟ್ಟ ಹೆಜ್ಜೆ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ : ಜಾಕೀರ್ ಹುಸೇನ್ ಶಿವಮೊಗ್ಗ ವಕ್ಫ್ ನಿರೀಕ್ಷಕರಾಗಿ ಪದೋನ್ನತಿ

ದಾವಣಗೆರೆ : ಜಿಲ್ಲಾ ವಕ್ಫ್ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದ್ವಿತೀಯ ದರ್ಜೆ ಸಹಾಯಕರಾದ ಜಾಕೀರ್ ಹುಸೇನ್ ಅವರು ಶಿವಮೊಗ್ಗ ಜಿಲ್ಲೆಯ…

By Dinamaana Kannada News

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ 21:  ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ …

By Dinamaana Kannada News

ದಾವಣಗೆರೆ : ಯುವಕರು ಏಡ್ಸ್ ಬಗ್ಗೆ ಜಾಗೃತಿವಹಿಸುವುದು ಅತೀ ಮುಖ್ಯ

ದಾವಣಗೆರೆ ಆ.12: ಏಡ್ಸ್ ಕುರಿತಂತೆ ಯುವಜನರಲ್ಲಿ ಜಾಗೃತಿ ಹೊಂದುವುದು ಅತೀ ಮುಖ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ…

By Dinamaana Kannada News

You Might Also Like

Jagalore
ತಾಜಾ ಸುದ್ದಿ

ಯುವಕರು ಮೊಬೈಲ್ ಬಿಟ್ಟು ಗ್ರಂಥಾಲಯದ ಕಡೆ ಬನ್ನಿ: ಶಾಸಕ ಬಿ.ದೇವೇಂದ್ರಪ್ಪ ಕರೆ

By Dinamaana Kannada News
Davanagere
ತಾಜಾ ಸುದ್ದಿ

ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ. 24.1ರಷ್ಟು ಅನುದಾನ ಮೀಸಲಿರಿಸಿ : ದಲಿತ ಸಂಘರ್ಷ ಸಮಿತಿ

By Dinamaana Kannada News
Davanagere
ತಾಜಾ ಸುದ್ದಿ

ಜಿನೀವಾದ WHO ಪ್ರಾದೇಶಿಕ ಸದಸ್ಯರಾಗಿ ಡಾ.ಎಲ್.ರಾಕೇಶ್ ಆಯ್ಕೆ

By Dinamaana Kannada News
jagalorue
ಅಪರಾಧ ಸುದ್ದಿತಾಜಾ ಸುದ್ದಿ

ಜಗಳೂರು:ಬಗ್ಗೆನಹಳ್ಳಿ ಗ್ರಾಮದಲ್ಲಿ ಕುರಿಗಳ ಕಳ್ಳತನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?