Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ
ತಾಜಾ ಸುದ್ದಿ

ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ

Dinamaana Kannada News
Last updated: December 17, 2025 12:23 pm
Dinamaana Kannada News
Share
Davanagere
SHARE

ದಾವಣಗೆರೆ: ಮಕ್ಕಳ ಹಕ್ಕು, ರಕ್ಷಣೆ ಕುರಿತು ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ, ಪ್ರಾಥಮಿಕ ಶಾಲಾ ಹಂತದಿಂದಲೇ ಸಮರ್ಪಕ ತರಬೇತಿ, ಮಾರ್ಗದರ್ಶನ ನೀಡುವ ವ್ಯವಸ್ಥೆಯಾಗಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಯುನಿಸೆಫ್ ಮತ್ತು ಮೈಸೂರು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಮಕ್ಕಳ ಸಮಸ್ಯೆಗಳ ವರದಿಗಾರಿಕೆಯಲ್ಲಿ ಪತ್ರಕರ್ತರ ಹೊಣೆಗಾರಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

seem1 dinamaana ads

ಪತ್ರಕರ್ತರ ಜೊತೆಗೆ ವಿದ್ಯಾರ್ಥಿಗಳು, ಶಿಕ್ಷಕರಿಗೂ ಮಕ್ಕಳ ಸಮಸ್ಯೆಗಳು, ಕಾನೂನುಗಳ ಜಾಗೃತಿ ತರಬೇತಿ ನೀಡುವ ವ್ಯವಸ್ಥೆಯಾಗಬೇಕು. ಯುನಿಸೆಫ್ ಈ ನಿಟ್ಟಿನಲ್ಲಿ ಆದ್ಯತೆ ನೀಡಿ, ಮಕ್ಕಳನ್ನು ಪ್ರಾಥಮಿಕ ಹಂತದಿAದಲೇ ಜಾಗೃತರನ್ನಾಗಿ ಮಾಡಿದರೆ ಭವಿಷ್ಯದಲ್ಲಾಗುವ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ. ಉತ್ತಮ ನಾಗರಿಕ ಸಮಾಜವನ್ನು ನಿರ್ಮಿಸಲು ನೆರವಾಗುತ್ತದೆ ಎಂದು ಹೇಳಿದರು.

ಮಾಧ್ಯಮಗಳಲ್ಲಿ ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸಿ ಕಾಳಜಿಯುಕ್ತ ವರದಿಗಳು ದಿನವೂ ಪ್ರಕಟವಾಗುತ್ತಿವೆ. ಆದರೆ ಯಾವ ಸಮಸ್ಯೆಗೂ ಶಾಶ್ವತ ಪರಿಹಾರ ಸಿಗುತ್ತಿಲ್ಲ. ಕೆಟ್ಟ ವಿಚಾರಗಳು ಹೆಚ್ಚು ಪ್ರಚಾರದ ಮನ್ನಣೆ ಪಡೆದರೆ ಒಳ್ಳೆಯ ಕೆಲಸಗಳು ಬೆಳಕಿಗೆ ಬರುವುದೇ ಇಲ್ಲ. ಅಲ್ಲದೆ ಮಕ್ಕಳ ಮೇಲಿನ ದೌರ್ಜನ್ಯ ವಿಚಾರಗಳ ಕುರಿತು ವರದಿ ಮಾಡುವಾಗ ಅವರ ಜೀವನ, ಕುಟುಂಬದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ತಂಬಾಕು, ಮದ್ಯಪಾನದ ಅಪಾಯಗಳ ಬಗ್ಗೆ ಜನರಿಗೆ ಜಾಹೀರಾತುಗಳ ಮೂಲಕ ತಿಳಿವಳಿಕೆ ನೀಡಲಾಗುತ್ತದೆ. ಆದರೆ ಹಳ್ಳಿ-ಪಟ್ಟಣ ಭೇದವಿಲ್ಲದೆ ಅಪ್ಪ-ಮಕ್ಕಳು ಕೂಡಿಯೇ ಕುಡಿಯುವ, ಬೀಡಿ ಸೇದುವ ದುರಾಭ್ಯಾಸವನ್ನು ಮಾಡುವರು. ಮಕ್ಕಳ ಹಕ್ಕುಗಳಿಗೆ ಹಲವಾರು ಕಾನೂನುಗಳಿವೆ. ರಕ್ಷಣೆಗಾಗಿ ಸಮಿತಿಗಳು, ಸಂಘಟನೆಗಳು ಕೆಲಸ ಮಾಡುತ್ತವೆ. ಆದರೆ ಇದುವರೆಗೂ ಅವುಗಳ ಎಷ್ಟರ ಮಟ್ಟಿಗೆ ಪಾಲನೆಯಾಗಿದೆ ಎಂಬುದನ್ನು ಪರಿಶೀಲಿಸುತ್ತಿಲ್ಲ. ಸರ್ಕಾರ ಮತ್ತು ಆಡಳಿತ ಯಂತ್ರವನ್ನು ಎಚ್ಚರಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ನುಡಿದರು.

ಯುನಿಸೆಫ್ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದ ಅಧಿಕಾರಿ ಪ್ರೊಸುನ್ ಸೇನ್ ಮಾತನಾಡಿ, ಭಾರತ ಮಾತ್ರವಲ್ಲ, ಜಗತ್ತಿನಾದ್ಯಂತ ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಯೂನಿಸೆಫ್, ವರ್ಷವಿಡೀ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಜೊತೆಗೆ ಪರಿಹಾರ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಸಮಸ್ಯೆಗೆ ಸ್ಪಂದಿಸಿ ಪರ್ಯಾಯಗಳನ್ನು ರೂಪಿಸುವ ಪ್ರಯತ್ನವನ್ನು ಮಾಡುತ್ತಿದೆ ಎಂದು ತಿಳಿಸಿದರು.

Read also : ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು

ಮೈಸೂರು ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಪ್ರೊ.ಎಂ.ಎಸ್. ಸಪ್ನಾ ಮಾತನಾಡಿ, ಪತ್ರಕರ್ತರಿಗೆ ಮಕ್ಕಳ ಹಕ್ಕು, ಕಾನೂನು, ಆರೋಗ್ಯ ಸಮಸ್ಯೆಗಳು ಹಾಗೂ ಶೈಕ್ಷಣಿಕ ವಿಚಾರಗಳನ್ನು ಕುರಿತು ಚರ್ಚೆಯ ಮೂಲಕ ಮನನ ಮಾಡಿಕೊಡುವ ಉದ್ದೇಶದಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಆ ಮೂಲಕ ಸುಸ್ಥಿರ, ಆರೋಗ್ಯವಂತ ಸಮಾಜ ನಿರ್ಮಿಸುವ ಉದ್ದೇಶವೂ ಇದಾಗಿದೆ ಎಂದು ವಿವರಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಶಿವಕುಮಾರ ಕಣಸೋಗಿ ಮಾತನಾಡಿದರು. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು.

ನಂತರ ನಡೆದ ಕಾರ್ಯಾಗಾರದಲ್ಲಿ ಮಕ್ಕಳ ಹಕ್ಕು ಮೇಲ್ವಿಚಾರಣೆ ರಾಜ್ಯ ಸಂಚಾಲಕ ಡಾ.ವಾಸುದೇವ ಶರ್ಮಾ ಅವರು ಮಕ್ಕಳ ಹಕ್ಕುಗಳ ಕಾರ್ಯಚೌಕಟ್ಟು ಮತ್ತು ಕಾನೂನುಗಳು ಕುರಿತು ಮಾತನಾಡಿದರು.

ಯುನಿಸೆಫ್ ವೈದ್ಯಾಧಿಕಾರಿ ಡಾ. ಶ್ರೀಧರ ರ‍್ಯಾವಂಕಿ ಅವರು ಇತ್ತೀಚನ ಮಕ್ಕಳ ಆರೋಗ್ಯ ಸಮಸ್ಯೆಗಳು ಮತ್ತು ಸಾಂಕ್ರಾಮಿಕವಲ್ಲದ ಕಾಯಿಲೆಗಳು ಕುರಿತು ಪತ್ರಕರ್ತರೊಂದಿಗೆ ಸಂವಾದ ನಡೆಸಿದರು.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .
Share This Article
Twitter Email Copy Link Print
Previous Article Davanagere ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು
Next Article ಸಚಿವ ಶಿವಾನಂದ ಪಾಟೀಲ 35 ಮೆಕ್ಕೆಜೋಳ ಖರೀದಿ ಕೇಂದ್ರ: ಡಿಸ್ಟಿಲರಿಗಳಿಂದ 15,747, ಕುಕ್ಕುಟ ಉದ್ಯಮದಿಂದ 10,465 ಮೆಟ್ರಿಕ್‌ ಟನ್‌ ಬೇಡಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ನೀತಿ ಸಂಹಿತೆ ಜಾರಿ

ದಾವಣಗೆರೆ, ಮಾ.16 : ಭಾರತ ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ನಂ.13 ರ ದಾವಣಗೆರೆ ಲೋಕಸಭಾ…

By Dinamaana Kannada News

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್…

By Dinamaana Kannada News

Davanagere | ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ಆ.30 (Davangere)  : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?