ದಾವಣಗೆರೆ : ಸಿನಿಮಾ ಸಿರಿ ಸಂಸ್ಥೆಯಿಂದ ಕಾಲವನ್ನು ತಡೆಯೋರು ಯಾರೂ ಇಲ್ಲ ಎಂಬ ಶೀರ್ಷಿಕೆಯೊಂದಿಗೆ ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ದಿವಂಗತ ದ್ವಾರಕೀಶ್ ಸ್ಮರಣಾರ್ಥ ಗಾನನಮನ ಕಾರ್ಯಕ್ರಮವನ್ನು ಜೂ.8ರಂದು ಸಂಜೆ 6 ಗಂಟೆಗೆ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಅಂದನೂರು ಮುಪ್ಪಣ್ಣ ಮಾತನಾಡಿ, ತಮ್ಮ ಅಧ್ಯಕ್ಷತೆಯ ಸಮಾರಂಭವನ್ನು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಯಾಗಿ ಬೆಂಗಳೂರು ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹೆಚ್.ಆರ್.ಭಾರ್ಗವ ಆಗಮಿಸಲಿದ್ದಾರೆ. ದ್ವಾರಕೀಶ್ ಚಿತ್ರಗಳ ಇಂಪಾದ ಹಾಡುಗಳನ್ನು ಆಲಿಸುವ ಅವಕಾಶವಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಕಲಾಸಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಂಸ್ಥೆಯ ಡಾ.ನಾಗಪ್ರಕಾಶ, ಎನ್.ವಿ.ಬಂಡಿವಾಡ, ಸಾಲಿಗ್ರಾಮ ಗಣೇಶ್ ಶೆಣೈ, ಎಂ.ಜಿ.ಜಗದೀಶ, ಮಲ್ಲಿಕಾರ್ಜುನ, ಹೆಚ್.ವಿ.ಮಂಜುನಾಥಸ್ವಾಮಿ ಸುದ್ದಿಗೋಷ್ಠಿಯಲ್ಲಿದ್ದರು.