ಟಾಲಿವುಡ್ ನಟ ಜೂನಿಯರ್ ಎನ್‌ಟಿಆರ್ ನಟನೆಯ ದೇವರ ಸಿನಿಮಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಇದೀಗ ಇದೇ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಈ ಪ್ಯಾನ್ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ.
ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ ಈ ಚಿತ್ರದ ನಿರ್ಮಾಪಕರು. ದೇವರ ಸಿನಿಮಾ ಮೂಲಕ, ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸೌತ್‌ಗೆ ಎಂಟ್ರಿಕೊಟ್ಟಿದ್ದಾರೆ. ಖಳ ನಟನಾಗಿ ಸೈಫ್ ಅಲಿಖಾನ್ ಚಿತ್ರದಲ್ಲಿ ನಟಿಸಿದ್ದಾರೆ.
ಈಗಾಗಲೇ ಇದೇ ದೇವರ ಸಿನಿಮಾದಿಂದ ಫಿಯರ್ ಹಾಡು ಬಿಡುಗಡೆಯಾಗಿದೆ. ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡಕ್ಕೆ ಮೊದಲ ಹಾಡೇ ದೊಡ್ಡ ಆಹ್ವಾನ ನೀಡಿತ್ತು. ಇದೀಗ ಇದೇ ಸಿನಿಮಾದ ಅನಿರುದ್ಧ ರವಿಚಂದರ್ ಸಂಗೀತ ನೀಡಿರುವ ಎರಡನೇ ಹಾಡು ಬಿಡುಗಡೆಯಾಗಿದೆ. ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ.. ಸಾಹಿತ್ಯವುಳ್ಳ ರೊಮ್ಯಾಂಟಿಕ್ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.
ಈ ಹಾಡಿನಲ್ಲಿ ಜಾಹ್ನವಿ ಕಪೂರ್ ಗ್ಲಾಮರಸ್ ಅವತಾರದಲ್ಲಿ ಕಣ್ಮನ ಸೆಳೆದಿದ್ದಾರೆ. ಎನ್‌ಟಿಆರ್ ಮತ್ತು ಜಾಹ್ನವಿ ಜೋಡಿಯ ಕೆಮಿಸ್ಟ್ರಿಯೂ ನೋಡುಗರ ಕಣ್ಣರಳಿಸುವಂತಿದೆ. ವರದರಾಜ್ ಚಿಕ್ಕಬಳ್ಳಾಪುರ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.
ಈ ಹೈ-ಆಕ್ಟೇನ್ ದೇವರ ಸಿನಿಮಾ ಎರಡು ಭಾಗಗಳ ರಿಲೀಸ್ ಆಗಲಿದೆ, ಮೊದಲ ಭಾಗ ಸೆಪ್ಟೆಂಬರ್ 27 ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ರಿಲೀಸ್ ಆಗಲಿದೆ. ಇನ್ನು ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೇನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶ್ರೀಕರ್ ಪ್ರಸಾದ್ ಸಂಕಲನ, ಆರ್.ರತ್ನವೇಲು ಛಾಯಾಗ್ರಹಣ, ಸಾಬು ಸಿರಿಲ್ ಪ್ರೊಡಕ್ಷನ್ ಡಿಸೈನ್ ಮಾಡಿದ್ದಾರೆ.