ದಾವಣಗೆರೆ.ಜ.20: ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಪ್ರದಾಯಬದ್ದವಾಗಿ ಹಂದರಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಮಹೋತ್ಸವದ ಶುಭಾರಂಭಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು.
ದೇವಿಯ ಸನ್ನಿಧಾನದ ಮುಂಭಾಗದಲ್ಲಿ ಹಂದರಕಂಬವನ್ನು ಪ್ರತಿಷ್ಠಾಪಿಸಿ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ನಂತರ ಶ್ರೀ ದುರ್ಗಾಂಭಿಕಾ ದೇವಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಸಮಸ್ತ ಲೋಕದ ಕ್ಷೇಮ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ಅರ್ಚಕರು, ಜಾತ್ರಾ ಸಮಿತಿಯ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.
