ದಾವಣಗೆರೆ (Davanagere) : ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪು ಚುಕ್ಕೆ ತರುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ಬಿಜೆಪಿಯ ಮತ್ತು ಜೆಡಿಎಸ್ ಪಕ್ಷಗಳು ಸಿದ್ದರಾಮಯ್ಯ ಅವರ ಹೆಸರನ್ನು ಹಾಳು ಮಾಡಲು ಈ ರೀತಿ ಮಾಡುತ್ತಿದ್ದಾರೆ ಆದರೆ, ಇದು ನಡೆಯುವುದಿಲ್ಲ. ಸಿದ್ದರಾಮಯ್ಯ ಯಾವುದೇ ಕಳಂಕಿತ ವ್ಯಕ್ತಿ ಅಲ್ಲ ಹಿಂದುಳಿದವರ ಏಳಿಗೆ ಸಹಿಸದೆ ಈ ರೀತಿಯಾಗಿ ಅವರ ಹೆಸರಿಗೆ ಕಪು. ಚುಕ್ಕೆ ತರುವ ಪ್ರಯತ್ನ ನಡೆಯುತ್ತಿದೆ ರಾಜಕೀಯ ಪ್ರೇರಿತವಾದ ಇಂತಹ ಕೆಲಸಗಳನ್ನು ಬಿಡಬೇಕು ದಾವಣಗೆರೆ ಜಿಲ್ಲಾ ಯುವ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಅವರಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಯುವ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಹೇಳಿದ್ದಾರೆ.
Read also : Crime News | ಸಾಲಬಾಧೆ : ರೈತ ಆತ್ಮಹತ್ಯೆ