Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜಕೀಯ

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ

Dinamaana Kannada News
Last updated: January 5, 2025 8:59 am
Dinamaana Kannada News
Share
cm siddaramaiah davangere kanaka jayanthi
SHARE

ದಾವಣಗೆರೆ, ಜನವರಿ 05: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.

ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜಕೀಯ ಚರ್ಚೆ ನಡೆದಿಲ್ಲ

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಮಾರ್ಚ್ ನಲ್ಲಿ ಬಜೆಟ್ ಮಂಡನೆ

ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.

TAGGED:ಮುಖ್ಯಮಂತ್ರಿಮುಖ್ಯಮಂತ್ರಿ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ
Share This Article
Twitter Email Copy Link Print
Previous Article davanagere kanaka jayanti 2025 ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !
Next Article davanagere ಸಂಘಟನೆ-ಒಗ್ಗಟ್ಟು ಇಲ್ಲದಿದ್ದರೆ ಶೋಷಿತ ಸಮುದಾಯಗಳಿಗೆ ಎಂದಿಗೂ ಶಕ್ತಿ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪೌರಕಾರ್ಮಿಕರ ಹುದ್ದೆಯನ್ನು ನೀಡಲು ಅಧಿಕಾರಿ, ಸಿಬ್ಬಂದಿ ಹಣ ಪಡೆದರೇ ಶಿಸ್ತು ಕ್ರಮ

ದಾವಣಗೆರೆ ಮೇ.05 (Davanagere): ಮಹಾನಗರಪಾಲಿಕೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ಪಾಲಿಕೆಯ ಯಾವುದೇ ಅಧಿಕಾರಿ, ಸಿಬ್ಬಂದಿಗಳು ಹಣ ನೀಡುವಂತೆ ಅಥವಾ ಒತ್ತಾಯ…

By Dinamaana Kannada News

Davanagere | ಶಾಂತಿ, ಸೌಹಾರ್ಧತೆ ಕಾಪಾಡಿ ದಾವಣಗೆರೆ ಅಭಿವೃದ್ದಿಗೆ ಶ್ರಮಿಸೋಣ : ಸಚಿವ ಮಲ್ಲಿಕಾರ್ಜುನ್‌

ದಾವಣಗೆರೆ.ಸೆ.24 (Davanagere)  ;  ದಾವಣಗೆರೆ ನಗರ ರಾಜ್ಯದಲ್ಲಿಯೇ ಮಾದರಿ, ಅಭಿವೃದ್ದಿ ಹೊಂದಿದ ನಗರವನ್ನಾಗಿಸಲು ಶಾಂತಿ, ಸೌಹಾರ್ದತೆ ಕಾಪಾಡಿಕೊಂಡು ಒಗ್ಗಟ್ಟಾಗಿ ಧಾರ್ಮಿಕ…

By Dinamaana Kannada News

ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) ಜ.6: ಯುವ ಜನತೆ ದೇಶದ ಶಕ್ತಿ, ದೇಶದ ಭವಿಷ್ಯ ಯುವಕರ ಕೈಯಲಿದೆ. ಚುನಾವಣೆಯಲ್ಲಿ ಒಮ್ಮೆ ಓಟು ಮಾಡಿದರೆ…

By Dinamaana Kannada News

You Might Also Like

Political analysis
Blog

Political analysis | ಸಿದ್ದು ಸಂಪುಟಕ್ಕೆ ಹೊಸ ಸೇನಾನಿ?

By Dinamaana Kannada News
Davanagere
ರಾಜಕೀಯ

Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

By Dinamaana Kannada News
liaquat-ali-m-k-congress-leader-davanagere
ರಾಜಕೀಯ

ದಣಿವರಿಯದ ಯುವ ನಾಯಕ ಲಿಯಾಖತ್ ಅಲಿ; ದಣಿವಿಲ್ಲದ ಸೇವೆ

By Dinamaana Kannada News
Political analysis
ರಾಜಕೀಯ

Political analysis | ಗಡ್ಕರಿ, ಸಿಂಗ್  ಬಿಜೆಪಿಯ ಹೊಸ ವಿಂಗ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?