Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ
ತಾಜಾ ಸುದ್ದಿ

ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ: ಸಿ.ಎಂ.ಸಿದ್ದರಾಮಯ್ಯ ಕರೆ

Dinamaana Kannada News
Last updated: October 13, 2024 12:39 pm
Dinamaana Kannada News
Share
Savadatti
siddaramahai
SHARE

ಸವದತ್ತಿ ಅ 13: ದೇವರು-ಧರ್ಮದ ಹೆಸರಲ್ಲಿ ದೇಶವನ್ನು-ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡೂ ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ, ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ರೂಪಿಸುತ್ತೇವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ದೇವರು-ಧರ್ಮ ತಮಗೆ ಮಾತ್ರ ಸೇರಿದ್ದು ಬಿಜೆಪಿಯವರು ಭಯಾನಕ ಮಾತಾಡ್ತಾರಲ್ಲಾ, ಆದರೆ ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥಾ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ  ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ ಅಂಗಡಿ ಹಾಕಿಕೊಟ್ಟಿದ್ದಾರೆ, ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥವು ನೂರಾರು ಉದಾಹರಣೆಗಳಿವೆ ಎಂದರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆಗಳನ್ನು ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ವಿಶ್ವಾಸ್ ವೈದ್ಯ ಅವರು ವಹಿಸಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article harihara Harihara | ಹರಿಹರದ ಬ್ರದರ್ಸ್ ಜಿಮ್‍ಗೆ : 8 ಪದಕ
Next Article davanagere Davanagere | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಅ. 23 ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು  : ಪಶು ಸಂಗೋಪನೆಯನ್ನೆ ನಂಬಿ ಬದುಕಿದವರು -4

ಒಂದು ಜಿಲ್ಲೆಯೆಂದರೆ  ಕೃಷಿಗೆ, ನೀರಾವರಿಗೆ, ಗೋಮಾಳಕ್ಕಿಷ್ಟೆಂದು ಹಸಿರು ವಲಯ (ಗ್ರೀನ್ ಝೋನ್)ದ ಭೂಮಿಯನ್ನು, ಉದ್ಯೋಗ ಕೊಡುವ ಕೈಗಾರಿಕೆಗಳ ಸ್ಥಾಪನೆಗೆಂದು ಒಂದಿಷ್ಟು…

By Dinamaana Kannada News

Davanagere | ರೈತ ಮುಖಂಡರ ಸತ್ಯಾಗ್ರಹ ಬೆಂಬಲಸಿ ರಾಷ್ಟ್ರಪತಿಗಳಿಗೆ ಮನವಿ

ದಾವಣಗೆರೆ (Davanagere):  ನವದೆಹಲಿಯ ಗಡಿಭಾಗದಲ್ಲಿ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ…

By Dinamaana Kannada News

ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ಸಂಸದರಿಗೆ ಮನವಿ

ದಾವಣಗೆರೆ (Davanagere): ಸಿಎನ್‍ಜಿ ಫಿಲ್ಲಿಂಗ್ ಸ್ಟೇಷನ್‍ಗಳನ್ನು ಹೆಚ್ಚಳ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸ್ಮಾರ್ಟ್ ಸಿಟಿ ಆಟೋ ಚಾಲಕರ–ಮಾಲೀಕರ ಸಂಘ ಹಾಗೂ…

By Dinamaana Kannada News

You Might Also Like

Davanagere police
ತಾಜಾ ಸುದ್ದಿ

Davanagere | ಸ್ವಯಂ ಪ್ರೇರಿತ ರಕ್ತದಾನ ಶಿಬಿರ : ಡಾ. ಬಿ ಆರ್ ರವಿಕಾಂತೇಗೌಡ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಪ್ರಧಾನಿಯವರ ನಿರ್ಧಾರಗಳನ್ನು ಎಲ್ಲರೂ ಬೆಂಬಲಿಸಬೇಕು : ಆಲೂರು ನಿಂಗರಾಜ್

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ : ಮೇ.26 ಕೊನೆಯ ದಿನ

By Dinamaana Kannada News
Davanagere
ತಾಜಾ ಸುದ್ದಿ

Davangere | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?