Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್
ತಾಜಾ ಸುದ್ದಿ

ರಸ್ತೆ ಸುರಕ್ಷತಾ ಸಭೆ | ಬಾಕಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್

Dinamaana Kannada News
Last updated: May 21, 2025 1:25 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) :  ಜಿಲ್ಲೆಯ ವಿವಿದೆಡೆ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಹಲವೆಡೆ ಕಿರಿದಾದ ರಸ್ತೆ ಹಾಗೂ ಅಂಡರ್ ಪಾಸ್, ಸೇವಾ ರಸ್ತೆ ಸ್ಥಾಪಿಸಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರದ ಎಸ್.ಎಸ್.ಹೈಟೆಕ್ ಮುಖ್ಯ ಆಸ್ಪತ್ರೆಯ ಮುಖ್ಯ ದ್ವಾರ ರಾಷ್ಟ್ರೀಯ ಹೆದ್ದಾರಿ-48ರ, ಚೈನೇಜ್ ಅಂಡರ್ ಪಾಸ್ ಬಳಿ ಭಾರಿ ವಾಹನ, ನಗರ ಸಾರಿಗೆ, ಲಾರಿ, ಬಸ್ ವಾಹನಗಳು ಸಂಚರಿಸುತ್ತಿವೆ. ಇಲ್ಲಿನ ಕೆಳ ಸೇತುವೆ ತುಂಬಾ ಕಿರಿದಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಕುರಿತು ಮಾಹಿತಿ ಪಡೆದ ಸಂಸದೆ ಶೀಘ್ರದಲ್ಲಿಯೇ ಇದನ್ನು ಪರಿಶೀಲಿಸಿ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಷ್ಟೇ ಅಲ್ಲದೇ ಕೆಲವು ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್‍ಗಳಲ್ಲಿ ಸೂಕ್ತವಾದ ಬೆಳಕಿನ ವ್ಯವಸ್ಥೆ ಇಲ್ಲಾ. ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು ಸಂಚರಿಸುತ್ತಿರುತ್ತಾರೆ. ಅವರುಗಳಿಗೆ ತೊಂದರೆಯಾಗದಂತೆ ಅಗತ್ಯವಿರವ ಕಡೆ ಕ್ಯಾರೇಜ್-ವೇ ಹೆಚ್ಚಿಸುವುದರ ಜೊತೆಗೆ ಬೆಳಕಿನ ವಿದ್ಯುತ್‍ದೀಪದ ವ್ಯವಸ್ಥೆ ಮಾಡಬೇಕು. ಇದರಿಂದ ಕಳ್ಳತನ, ಅಪಘಾತ ಸೇರಿದಂತೆ ಇನ್ನಿತರೆ ಅಹಿತಕರ ಘಟನೆಗಳು ಜರುಗುವ ಸಂಭವ ಕಡಿಮೆಯಾಗುತ್ತದೆ ಎಂದ ಅವರು, ಮಳೆಗಾಲ ಆರಂಭವಾಗಿದೆ, ಹಲವೆಡೆ ನೀರು ನಿಲ್ಲುವ ಕುರಿತು ವರದಿ, ಆರೋಪ ಕೇಳಿ ಬರುತ್ತಿವೆ. ಆದ್ದರಿಂದ ಅಂತಹ ಸ್ಥಳಗಳನ್ನು ಗುರುತಿಸಿ ಸರಿಪಡಿಸಬೇಕು ಎಂದರು.

ಹರಿಹರ ತಾಲ್ಲೂಕಿನ ಹರಗನಹಳ್ಳಿ ಹಾಗೂ ಆನಗೋಡು, ಹೆಬ್ಬಾಳು ಬಳಿ ಏಕಾ-ಏಕಿ ತಿರುವು ಪಡೆದುಕೊಳ್ಳುವ ವಾಹನಗಳಿಗೆ ಡಾಬಾ ಹೋಟೆಲ್, ಪೆಟ್ರೋಲ್ ಬಂಕ್, ಇನ್ನಿತರೆ ಅಂಗಡಿ ಮುಂಗಟ್ಟುಗಳು ಅವೈಜ್ಞಾನಿಕ ಮತ್ತು ಅನಧಿಕೃತವಾಗಿ ನಿರ್ಮಿಸಿರುವುದರಿಂದ ಅಪಘಾತ ಹೆಚ್ಚಾಗುತ್ತಿವೆ. ಅಲ್ಲಿನ ಅನಧಿಕೃತ, ಮತ್ತು ನಿಯಮಬಾಹಿರವಾಗಿ ಇರುವವರ ಮೇಲೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಟೋಲ್‍ಗಳಲ್ಲಿ ಎನ್‍ಪಿಆರ್ ನಂಬರ್ ಪ್ಲೇಟ್ ನೊಂದಣಿ ಮಾಡಿಕೊಳ್ಳುವ ಉತ್ತಮ ಗುಣಮಟ್ಟದ ಸಿಸಿಟಿವಿ ಮತ್ತು ಬೆಳಕಿನ ವಿದ್ಯುದೀಪಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದರು. ಇದಕ್ಕೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರತಿ 70 ಕಿ.ಮೀ ವ್ಯಾಪ್ತಿಗೆ 2 ಅಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು. ಯಾವುದೇ ರೀತಿಯ ಅಪಘಾತಗಳು ಸಂಭವಿಸಿದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಪಂದಿಸಬೇಕು. ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 1033 ಸಂಖ್ಯೆ ಸರಿಯಾದ ರೀತಿಯಲ್ಲಿ ಬಳಕೆಯಾಗುತ್ತಿಲ್ಲ. ಆದ್ದರಿಂದ ಸಹಾಯವಾಣಿ ಸಂಖ್ಯೆಯನ್ನು ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಲು ಸಹಾಯವಾಗುವಂತೆ ಕ್ರಮವಹಿಸಬೇಕು. ಕೆಲವು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿ ಇದ್ದಾಗ ಅಪಘಾತಗಳು ಸಂಭವಿಸಿದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ಗಮನಹರಿಸಿ ಸರಿಯಾದ ಸಂದರ್ಭದಲ್ಲಿ ಅಂಬುಲೆನ್ಸ್, ರಕ್ಷಣೆ ಮಾಡುವ ಮೂಲಕ ಸ್ಪಂದಿಸಲು ತಿಳಿಸಿದರು.

Read also : ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ

ಅದೇ ರೀತಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕುಂದವಾಡ ರಸ್ತೆಯಲ್ಲಿ ಸೇವಾ ರಸ್ತೆ ನಿರ್ಮಿಸಿಲ್ಲ. ಸೂಕ್ತ ಚರಂಡಿ ವ್ಯವಸ್ತೆ ಕಲ್ಪಿಸದ ಕಾರಣ ಮಳೆ ನೀರು ಸಂಪೂರ್ಣ ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಠಿಯಾಗಿದೆ. ಇಂತಹ ಅವೈಜ್ಞಾನಿಕವಾದ ಕಾಮಗಾರಿ ನಿರ್ಮಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.

ರಸ್ತೆಯ ಇಕ್ಕೆಲಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿದ್ದು, ಸಾರ್ವಜನಿಕರಿಗೆ, ಸವಾರರಿಗೆ ತೊಡಕುಂಟಾಗಿರುವ ಕುರಿತು ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ತ್ವರಿತವಾಗಿ ತೆರವು ಮಾಡಿಸಿಸುವ ಮೂಲಕ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಲು ತಿಳಿಸಿದರು.

ಹೂವಿನ ಗೂಡಂಗಡಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸೂಚನೆ: ನಗರದ ಪಿ.ಬಿ ರಸ್ತೆಯ ದೇವರಾಜ ಅರಸು ವೃತ್ತದ ಬಳಿ ಇರುವ ಬಿಎಸ್‍ಎನ್‍ಎಲ್ ಕಚೇರಿಯ ಮುಂಭಾಗ ಸುಮಾರು 15-15 ಹೂವಿನ ಗೂಡಂಗಿಡಿಗಳಿದ್ದು, ಅವರುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಾಹನ ಸಂಚಾರಕ್ಕೆ ಅಡ್ಡಿಪಡಿಸದಂತೆ ತಾತ್ಕಾಲಿಕವಾಗಿ ಸೂಕ್ತ ಕ್ರಮವಹಿಸಬೇಕು. ತದನಂತರದ ದಿನಗಳಲ್ಲಿ ಒಂದೆಡೆ ಶಾಶ್ವತ ಸ್ಥಳ ಗುರುತಿಸಿ ಸ್ಥಳಾಂತರಿಸುವ ಕಾರ್ಯ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ತಿಳಿಸಿದರು.

ಆಟೋರಿಕ್ಷಾಗಳಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯ: ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿಯವರೆಗೂ ನಗರದಲ್ಲಿ 525 ಆಟೋರಿಕ್ಷಾಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇನ್ನೂ ಮುಂದೆಯೂ ಮಾಡಲಾಗುವುದು ಆದ್ದರಿಂದ ಮೊದಲು ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಅಳವಡಿಕೊಂಡಲ್ಲಿ ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದರು.

ಈ ವೇಳೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನರೇಂದ್ರಬಾಬು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ ಸಂತೋಷ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ವಿಭಾಗೀಯ ನಿಯಂತ್ರಣಾಧಿಕಾರಿ ಫಕ್ರುದ್ದೀನ್,  ಡಿಹೆಚ್‍ಓ ಡಾ.ಷಣ್ಮುಖಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Dinamana.comKannada Newsಕನ್ನಡ ಸುದ್ದಿಡಾ.ಪ್ರಭಾ ಮಲ್ಲಿಕಾರ್ಜುನ್ದಿನಮಾನ.ಕಾಂರಸ್ತೆ ಸುರಕ್ಷತಾ ಸಭೆ
Share This Article
Twitter Email Copy Link Print
Previous Article Davanagere ಡಿಜಿಟಲ್ ವ್ಯವಸ್ಥೆಯ ಮೂಲಕವೇ ಭೂದಾಖಲೆಗಳ ವಿತರಣೆ : ಡಿಸಿ
Next Article Davanagere Davanagere | ಮನೆಗಳ್ಳತನ ಪ್ರಕರಣ : 7.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ವಿಶ್ವ ಅಸ್ತಮಾ ದಿನಾಚರಣೆ : ಸತತ ಚಿಕಿತ್ಸೆಯಿಂದ ಅಸ್ತಮಾ ಕಾಯಿಲೆ ಹತೋಟಿಗೆ

ತೀವ್ರ ಅಸ್ತಮಾ ಎಂದರೇನು? ಅಸ್ತಮಾ ಕಾಯಿಲೆಯು ಸಾಕಷ್ಟು ಜನರನ್ನು ಭಾದಿಸಿದರೂ ಸರಿಯಾದ ಹಾಗೂ ಸತತವಾದ ಚಿಕಿತ್ಸೆಯಿಂದ ಹತೋಟಿಗೆ ಬರುತ್ತದೆ. ಆದರೆ,…

By Dinamaana Kannada News

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ನ.21 (Davanagere) ; ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ…

By Dinamaana Kannada News

ಭೀಮ ಕೋರೆಗಾಂವ್ ಒಂದು ಸ್ವಾಭೀಮಾನದ ಯುದ್ಧ

ಭೀಮ ಕೋರೆಗಾಂವ್ ಇತಿಹಾಸದ ಕುತು ಹಿರಿಯ ವಕೀಲ ಮೋಹನ್ ಕುಮಾರ್ ಎಂ.ಸಿ ಅವರ ವಿಶೇಷ ಲೇಖನ.  ಇತಿಹಾಸವನ್ನು ಅರಿಯದವರು ಇತಿಹಾಸವನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?