ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಗುರುವಾರ ಭರ್ಜರಿ ರೋಡ್ ಷೋ ನಡೆಸಿದರು.
ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಪತಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮಾವ ಶಾಸಕ ಡಾ|| ಶಾಮನೂರು ಶಿವಶಂಕರಪ್ಪನವರು ಹಾಗೂ ಶಾಸಕರಾದ ಡಿ.ಜಿ.ಶಾಂತನಗೌಡ, ಶಿವಗಂಗಾ ಬಸವರಾಜ್, ದೇವೆಂದ್ರಪ್ಪ, ಕೆ.ಎಸ್.ಬಸವಂತಪ್ಪ, ಶ್ರೀಮತಿ ಲತಾ ಮಲ್ಲಿಕಾರ್ಜುನ್ ಅವರು ಸಾಥ್ ನೀಡಿದರು.
ಲಕ್ಷಪೋದಿ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.
ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಸ್ಥಾನದಿಂದ ಆರಂಭವಾಗುವ ಒಂದು ರೋಡ್ ಷೋಗೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿದರು
ಈ ರೋಡ್ ಷೋ ಹಗೆದಿಬ್ಬ ಸರ್ಕಲ್, ಕಾಳಿಕಾದೇವಿ ರಸ್ತೆ, ಚೌಕಿಪೇಟೆ ರಸ್ತೆ, ಬಕ್ಕೇಶ್ವರ ದೇವಸ್ಥಾನ, ಹಾಸಬಾವಿ ಸರ್ಕಲ್, ಮಾರ್ಕೇಟ್ ರಸ್ತೆ, ಮಂಡಿಪೇಟೆ, ಲಕ್ಷ್ಮೀ ಸರ್ಕಲ್ ಮೂಲಕ ಮಹಾನಗರ ಪಾಲಿಕೆಗೆ ಮುಂಭಾಗಕ್ಕೆ ಆಗಮಿಸಿತು. ಮತ್ತೊಂದು ರೋಡ್ ಷೋಗೆ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದ ಬಳಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಚಾಲನೆ ನೀಡಿದರು ಈ ರೋಡ್ ಷೋ ಹೆಚ್.ಕೆ.ಆರ್. ಸರ್ಕಲ್, ಡಾಂಗೆಪಾರ್ಕ್, ಶಿವಪ್ಪಯ್ಯ ಸರ್ಕಲ್, ತ್ರಿಶೂಲ್ ಟಾಕೀಸ್ ಮೂಲಕ ಪಿ.ಬಿ. ರಸ್ತೆಗೆ ಆಗಮಿಸಿತು.
ರೋಡ್ ಷೋಗೂ ಮುನ್ನ ಶಾಮನೂರಿನ ಆಂಜನೇಯ ಸ್ವಾಮಿ ದೇವಸ್ಥಾನ, ಕಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರು ಪೂಜೆ ಸಲ್ಲಿಸಿದರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ನಗರದೇವತೆ ದುರ್ಗಾಂಬಿಕಾ ದೇವಿ ದೇವಸ್ಥಾನ ಮತ್ತು ದರ್ಗಾಕ್ಕೆ ಪೂಜೆ ಸಲ್ಲಿಸಿದರು.
ಈ ಎರಡು ರೋಡ್ ಷೋಗಳು ಪಿ.ಬಿ.ರಸ್ತೆಯಲ್ಲಿ ಒಂದೇ ಕಡೆ ಸೇರಿ ಪಿ.ಬಿ.ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಬೃಹತ್ ರೋಡ್ ಷೋ ನಡೆಯಿತು. ಲಕ್ಷ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕುತ್ತಿದ್ದು, ಮುಗಿಲು ಮುಟ್ಟುವಂತಿತ್ತು.
ಈ ರೋಡ್ ಷೋನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ವಡ್ನಾಳ್ ರಾಜಣ್ಣ, ಎಸ್.ರಾಮಪ್ಪ, ಗುರುಸಿದ್ದನಗೌಡ, ನಂದಿಗಾವಿ ಶ್ರೀನಿವಾಸ್, ಅರಸೀಕೆರೆ ಕೊಟ್ರೇಶ್, ವಾಗೀಶ್ ಸ್ವಾಮಿ, ಡಾ|| ಟಿ.ಜಿ.ರವಿಕುಮಾರ್, ಸಮರ್ಥ ಶಾಮನೂರು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ,ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.