Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

Dinamaana Kannada News
Last updated: June 25, 2025 1:54 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ಜಾಗತಿಕವಾಗಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ನಮ್ಮದಾಗಿದ್ದು ಯುವ ಸಂಪತ್ತನ್ನು ಕಾಪಾಡಿಕೊಳ್ಳಲು ಮಾದಕ ವಸ್ತುಗಳಿಂದ ದೂರವಿರಲು ಇದರ ಸಾಗಾಟ ಮತ್ತು ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ರೈಲ್ವೆ ನಿಲ್ದಾಣ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಮಾದಕ ವಸ್ತುಗಳ ಪತ್ತೆಗೆ ಸ್ಕ್ಯಾನರ್ ಅಳವಡಿಕೆ ಪರಿಹಾರವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೇಲಾ ಡಿ.ಕೆ.ಅಭಿಪ್ರಾಯಪಟ್ಟರು.

ಬುಧವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈಮಾಸಿಕ ಸಭೆ, ಮಾದಕ ವಸ್ತುಗಳ ತಡೆ, ಪೋಕ್ಸೊ ತಡೆ, ಭಿಕ್ಷಾಟನೆ ತಡೆ ಸೇರಿದಂತೆ ಬಾಲನ್ಯಾಯ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಮಾದಕ ವಸ್ತುಗಳನ್ನು ರೈಲ್ವೆ ಮತ್ತು ಬಸ್‍ಗಳ ಮೂಲಕ ಸಾಗಣೆ ಮಾಡುತ್ತಿದ್ದು ಇದನ್ನು ಪತ್ತೆಹಚ್ಚಲು ಸ್ಕ್ಯಾನರ್ ಅಳವಡಿಕೆ ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರೊಂದಿಗೆ ಚರ್ಚೆ ಮಾಡಿದರು. ಇದಕ್ಕೆ ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಅನುದಾನವನ್ನು ನೀಡುವ ಮೂಲಕ ಸಾಧನ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜುಲೈ 12 ಕ್ಕೆ ಲೋಕ ಅದಾಲತ್; ಬರುವ ಜುಲೈ 12 ಕ್ಕೆ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಲಿದ್ದು ರಾಜಿಯಾಗಬಲ್ಲ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಆಯಾ ಇಲಾಖೆಯವರು ಇದಕ್ಕೆ ಸಂಪೂರ್ಣ ಸಹಕಾರ ನೀಡುವ ಮೂಲಕ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿ ಕಕ್ಷಿದಾರರೂ ಸಹ ಇದರ ಉಪಯೋಗ ಪಡೆದುಕೊಳ್ಳುವ ಮೂಲಕ ಶೀಘ್ರ ನ್ಯಾಯದಾನ ಪಡೆಯಬೇಕೆಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

ಬಾಲ್ಯ ವಿವಾಹ, ಪೋಕ್ಸೋ ತಡೆಗೆ ಒತ್ತು ನೀಡಿ; ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ, 2025 ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದಾವಣಗೆರೆ 9, ಹರಿಹರ 1, ಹೊನ್ನಾಳಿ 2, ಚನ್ನಗಿರಿ 6 ಪ್ರಕರಣಗಳು ಸೇರಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ. ಬಾಲ್ಯ ವಿವಾಹ ಮತ್ತು ಪೋಕ್ಸೋ ತಡೆಗಟ್ಟಲು  ಮಕ್ಕಳಿಗೆ ಶಾಲೆಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ಮಾಡಬೇಕಾಗಿದ್ದು ಡಿಡಿಪಿಐ ಕ್ರಮ ಕೈಗೊಳ್ಳಲು ತಿಳಿಸಿದರು.

ಹಾಸ್ಟೆಲ್ ವಿದ್ಯಾರ್ಥಿಗಳ ವಿವರ; ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರೆಸಿರುವ ಕುರಿತು ವರದಿಯನ್ನು ಸಿದ್ದಪಡಿಸಿ ನೀಡಬೇಕು. ವಿದ್ಯಾರ್ಥಿನಿಯರು ವ್ಯಾಸಂಗ ಮುಂದುವರೆಸಿರುವ ಬಗ್ಗೆ ಮತ್ತು ಕೈಗೊಂಡಿರುವ ಉದ್ಯೋಗದ ಬಗ್ಗೆಯು ಮಾಹಿತಿ ಸಂಗ್ರಹಿಸಿ ವರದಿ ನೀಡಲು ತಿಳಿಸಿದರು.

ಬಾಲ ಭವನ ಮತ್ತು ಸಂಘರ್ಷಕ್ಕೆ ಒಳಗಾಗಿರುವ ಮಕ್ಕಳ ಪಾಲನೆ ಪೋಷಣೆ ಕುರಿತಂತೆ ಅವರ ಪೋಷಣೆಗಾಗಿ ಕೈಗೊಂಡಿರುವ ಕ್ರಮಗಳು, ನಿರಾಶ್ರಿತ ಪರಿಹಾರ ಕೇಂದ್ರದಲ್ಲಿನ ನಿವಾಸಿಗಳ ಕುಟುಂಬಸ್ಥರನ್ನು ಪತ್ತೆಹಚ್ಚಿ ಅವರ ಕುಟುಂಬದವರ ಬಳಿ ಕಳುಹಿಸುವ ವ್ಯವಸ್ಥೆ ಜೊತೆಗೆ ಯಾರು ಪೋಷಕರನ್ನು ನೋಡಿಕೊಳ್ಳುವುದಿಲ್ಲ ಅದನ್ನು ಹಿರಿಯ ನಾಗರಿಕರ ಕಾಯ್ದೆಯಡಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ,   ಇತ್ತೀಚೆಗೆ ನಗರದ ಶ್ರೀರಾಮನಗರದಲ್ಲಿನ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್‍ಗೆ ರಾತ್ರಿ 10 ರ ಸಮಯದಲ್ಲಿ ಅನಿರೀಕ್ಷಿತ ಭೇಟಿ ನೀಡಲಾಗಿತ್ತು. ಈ ವೇಳೆ ಹಾಸ್ಟೆಲ್ ವಾರ್ಡನ್ ಇರಲಿಲ್ಲ, ಈ ಬಗ್ಗೆ ವಿದ್ಯಾರ್ಥಿಗಳನ್ನು ಕೇಳಿದಾಗ ಬಂದು ಹೋಗುತ್ತಾರೆ ಎಂದು ಮಾಹಿತಿ ನೀಡಿದರು. ವಾರ್ಡನ್ ಹಾಸ್ಟೆಲ್‍ನಲ್ಲಿ ಇದ್ದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಕುರಿತು ಗಮನಿಸಬೇಕು. ಆದರೆ ಇವರು ತಮ್ಮ ಕರ್ತವ್ಯಲೋಪವೆಸಗುತ್ತಿದ್ದಾರೆ. ನಿಯಂತ್ರಿಸುವ ವಾರ್ಡನ್ ಇಲ್ಲದಿದ್ದಲ್ಲಿ ವಿದ್ಯಾರ್ಥಿಗಳ ನಿಗಾತಪ್ಪಲಿದೆ. ಇದರಿಂದ ಅನೇಕ ದೂರುಗಳಿಗೆ ಆಸ್ಪದವಾಗಲಿದ್ದು ಈ ರೀತಿ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‍ಕುಮಾರ್, ಜಿಲ್ಲಾ ಸರ್ಕಾರಿ ವಕೀಲರಾದ ಶಾಮನೂರು ಪ್ರಕಾಶ್, ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Crime davanagere ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ
Next Article Davanagere ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕೊಟ್ಟ ಮಾತಿನಂತೆ ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ಕಲ್ಪಿಸಿದ ಶಿಕ್ಷಕ ಮೇಘರಾಜ್!

ದಿನಮಾನ.ಕಾಂ ವಿಶೇಷ, ದಾವಣಗೆರೆ: ಪ್ರವಾಸ ಕರೆದುಕೊಂಡು ಹೋಗುವುದಾಗಿ ವಿದ್ಯಾರ್ಥಿಗಳಿಗೆ ಮಾತು ನೀಡಿದ್ದ ಶಿಕ್ಷಕರೊಬ್ಬರು ಸ್ವಂತ ಖರ್ಚಿನಲ್ಲಿ 40 ಪಿಯು ವಿದ್ಯಾರ್ಥಿಗಳನ್ನು…

By Dinamaana Kannada News

davanagere | ಏಕಲವ್ಯ ಪ್ರಶಸ್ತಿಗೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ದಾವಣಗೆರೆ,ಆಗಸ್ಟ್.22 (davanagere ) ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಸಂಘಟಿಸುವ ಕ್ರೀಡಾ ಕ್ಷೇತ್ರದಲ್ಲಿ 2023 ರಲ್ಲಿ ಅಸಾಧಾರಣಾ ಪ್ರತಿಭೆಯನ್ನು…

By Dinamaana Kannada News

“ಬ್ಯಾಕ್ ಬೆಂಚರ್ಸ್” ಗೆಲ್ಲಲೇಬೇಕು ನಿರ್ದೇಶಕ – ನಿರ್ಮಾಪಕ ರಾಜಶೇಖರ್

ಭಿನ್ನ ಕಂಟೆಂಟಿನ ಮನ್ಸೂಚನೆಯೊಂದಿಗೆ ಕ್ರೇಜ್ ಹುಟ್ಟುಹಾಕಿರುವ ಚಿತ್ರ `ಬ್ಯಾಕ್ ಬೆಂಚರ್ಸ್’. ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿರುವ ಈ ಚಿತ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?