Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ
ತಾಜಾ ಸುದ್ದಿ

ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

Dinamaana Kannada News
Last updated: February 20, 2026 1:39 pm
Dinamaana Kannada News
Share
Davanagere
SHARE

ದಾವಣಗೆರೆ,ಫೆ.20 : ಸಂವಿಧಾನ ರಚನೆಯಾಗಿ ಸುಮಾರು ದಶಕಗಳು ಕಳೆದರೂ ಅಸಮಾನತೆ ಹೋಗಲಾಡಿಸಲು ಸಾಧ್ಯವಾಗಿಲ್ಲ,  ಅಸಮಾನತೆ ನಿವಾರಣೆಗೆ ಮಾನವ ಸಂಪನ್ಮೂಲ ಅಭಿವೃದ್ದಿಯಿಂದ ಮಾತ್ರ ಸಾಧ್ಯವಿದ್ದು ಈ ನಿಟ್ಟಿನಲ್ಲಿ ಯುವ ಜನರ ಅಭಿವೃದ್ದಿ ಕೈಗೊಳ್ಳಬೇಕಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣನವರ ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಸಹಯೋಗದಲ್ಲಿ ಬಿ.ಎಸ್.ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ದಿನವನ್ನು ಉದ್ಪಾಟಿಸಿ ಮಾತನಾಡಿದರು.

ಸಾಮಾಜಿಕ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನವೀಕೃತ ಬದ್ದತೆ” ಎಂಬ ಘೋಷವಾಕ್ಯ ದೊಂದಿಗೆ ನಾವು ಇಂದು ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ, 2007ನೇ ಇಸವಿಯಿಂದ ಈ ವಿಶ್ವದಲ್ಲಿ ಸಾಮಾಜಿಕ ನ್ಯಾಯ ಅನ್ನುವುದನ್ನು ಜನರಿಗೆ ತಿಳಿಸಿಕೊಡಬೇಕು ಎನ್ನುವ ಉದ್ದೇಶದಿಂದ ಆರಂಭವಾಯಿತು.

ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆ ಸರಿಯಾಗಿ ತಿಳಿದಿರಲಿಲ್ಲ. ಆದ್ದರಿಂದ 2007ರಲ್ಲಿ ಇದರ ಬಗ್ಗೆ ಚರ್ಚೆಯಾಗಿ, 2009ರಿಂದ ಇಂದಿನವರೆಗೂ ನಾವು ವಿಶ್ವ ಮಟ್ಟದಲ್ಲಿ ಸಾಮಾಜಿಕ ನ್ಯಾಯ ದಿನವನ್ನು ಆಚರಿಸುತ್ತಿದ್ದೇವೆ. ಇದು ಬರಿ ಭಾರತಕ್ಕೆ ಅಷ್ಟೇ ಸೀಮಿತವಾಗಿಲ್ಲ, ವಿಶ್ವ ಸಂಸ್ಥೆಯ ಭಾಗವಾಗಿರುವ ಎಲ್ಲಾ ರಾಷ್ಟ್ರಗಳಿಗೂ ಇದು ಸಂಬಂಧಿಸಿದೆ ಎಂದರು.

ಸಮಾನತೆ ಮತ್ತು ಗೌರವಯುತ ಜೀವನ ನಡೆಸಲು ಎಲ್ಲರಿಗೂ ಅನುಕೂಲವಾಗುವಂತಹ ಎಲ್ಲಾ ರೀತಿಯ ಸಹಕಾರಗಳನ್ನು ಒದಗಿಸಿಕೊಡುವುದು, ಸಮಾಜದಲ್ಲಿ ಎಲ್ಲರೂ ಸಮಾನರು ಎನ್ನುವ ಮನೋಭಾವ ಮೂಡಿಸುವುದು. ಪ್ರತಿಯೊಬ್ಬ ಮನುಷ್ಯನಿಗೂ ಸಮಾನವಾದ ಹಕ್ಕುಗಳನ್ನು ಸರ್ಕಾರ ಅಥವಾ ಸಂಸ್ಥೆಗಳು ನೀಡುತ್ತಿವೆಯೇ ಎಂದು ಪರಿಶೀಲಿಸುವುದು. ಪ್ರತಿಯೊಬ್ಬ ವ್ಯಕ್ತಿಯೂ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸುವುದು ಸಾಮಾಜಿಕ ನ್ಯಾಯ ಆಗಿದೆ ಎಂದರು.

ಈ ದಿನಾಚರಣೆಯು ಕೇವಲ ವೇದಿಕೆಯ ಕಾರ್ಯಕ್ರಮವಾಗಿ ಉಳಿಯಬಾರದು. ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಜನರಿಗೆ ತಲುಪಿಸಬೇಕು. ಯಾವುದೇ ಒಂದು ಜನಾಂಗಕ್ಕೆ ಅಥವಾ ವಿಶಿಷ್ಟ ವೃತ್ತಿಯ ಜನರಿಗೆ ತೊಂದರೆಯಾಗುತ್ತಿದ್ದರೆ ಅದು ಸಾಮಾಜಿಕ ನ್ಯಾಯದ ವಿರುದ್ಧವಾಗಿರುತ್ತದೆ. ಇದನ್ನು ಕೇವಲ ಮಾತಿನಲ್ಲಿ ಹೇಳದೆ, ಪ್ರಾಯೋಗಿಕವಾಗಿ ಜಾರಿಗೆ ತರಬೇಕು ಎಂದರು.

Read also : ಫೆ. 20 ವಿಶ್ವ ಸಾಮಾಜಿಕ ನ್ಯಾಯ ದಿನ : ಸಮಾನತೆ ಮತ್ತು ಘನತೆಯೇ ಸಮಾಜದ ಅಡಿಪಾಯ

ಬಾಲಕ ಕಳ್ಳತನ ಮಾಡಿದಾಗ, ನಮ್ಮ ಕಾನೂನು ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯವು ಆ ಬಾಲಕನಿಗೂ ನ್ಯಾಯ ಒದಗಿಸಬೇಕು ಮತ್ತು ಯಾರ ವಸ್ತು ಕಳ್ಳತನವಾಗಿದೆಯೋ ಅವರಿಗೂ ನ್ಯಾಯ ಒದಗಿಸಬೇಕು. ಕೇವಲ ಶಿಕ್ಷೆ ನೀಡುವುದಷ್ಟೇ ಅಲ್ಲದೆ, ಆ ಪರಿಸ್ಥಿತಿಯ ಹಿಂದಿನ ಕಾರಣಗಳನ್ನು ಅರ್ಥೈಸಿಕೊಳ್ಳುವುದು ಕೂಡ ಸಾಮಾಜಿಕ ನ್ಯಾಯದ ಭಾಗವಾಗಿದೆ, ಶಿಕ್ಷಣ ಎಂದರೆ ಮಾಹಿತಿಯನ್ನು ಕಲೆ ಹಾಕಿಕೊಳ್ಳುವುದು, ಮಾಹಿತಿಯನ್ನು ಕರಗತ ಮಾಡಿ ಕೊಳ್ಳುವುದು, ಮಾಹಿತಿಯನ್ನು ಮನಸ್ಸಿನಲ್ಲಿ ತೆಗೆದುಕೊಳ್ಳುವುದು, ಅದನ್ನು ನಮ್ಮ ಜೀವನಕ್ಕೆ, ನಮ್ಮ ದೇಶಕ್ಕೆ, ನಮ್ಮ ರಾಷ್ಟ್ರಕ್ಕೆ, ನಮ್ಮ ಆರ್ಥಿಕತೆಗೆ, ನಮ್ಮ ದೇಶದ ಭದ್ರತೆಗೆ ಉಪಯೋಗಿಸಿಕೊಳ್ಳುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವು 60 ಯೂನಿಟ್ ರಕ್ತ ಸಂಗ್ರಹಿಸಿ ಆರೋಗ್ಯ ಇಲಾಖೆಗೆ ನೀಡಲಾಗುತ್ತದೆ ಎಂದು ಪ್ರಾಂಶುಪಾಲ ಗುರು ಅವರು ತಿಳಿಸಿದರು.

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ತಾಲ್ಲೂಕು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖಾಧಿಕಾರಿ ರಾಘವೇಂದ್ರ, ಹಿಂದುಳಿದ ವರ್ಗಗಳ ತಾಲ್ಲೂಕು ವಿಸ್ತಾರಣಾಧಿಕಾರಿ ಪುಷ್ಪಾ , ಕಾಲೇಜಿನ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಪನ್ಯಾಸಕ ಅಣ್ಣೇಶ್ ನಿರೂಪಿಸಿದರು. ಕು. ಚಂದನ ಪ್ರಾರ್ಥಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಮಮತಾ ಸ್ವಾಗತಿಸಿದರು.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ನ್ಯಾ. ಮಹಾವೀರ ಮ. ಕರೆಣ್ಣವರ ಫೆ. 20 ವಿಶ್ವ ಸಾಮಾಜಿಕ ನ್ಯಾಯ ದಿನ : ಸಮಾನತೆ ಮತ್ತು ಘನತೆಯೇ ಸಮಾಜದ ಅಡಿಪಾಯ
Next Article Davanagere ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಕ್ಕೆ ಸಿಎಂ,ಡಿಸಿಎಂಗೆ ಶಾಸಕ ಕೆ.ಎಸ್.ಬಸವಂತಪ್ಪ ಮನವಿ

ದಾವಣಗೆರೆ: ಭದ್ರಾ ಬಲದಂಡೆ ಕಾಮಗಾರಿ ಸ್ಥಗಿತಗೊಳಿಸಿ ಭದ್ರಾ ಅಚ್ಚುಕಟ್ಟು ಪ್ರದೇಶದ ಹಿನ್ನೀರು ಪ್ರದೇಶ ಅಥವಾ ಬೇರೆ ಮಾರ್ಗದಿಂದ ಚಿತ್ರದುರ್ಗ ಹಾಗೂ…

By Dinamaana Kannada News

Davanagere news | ಗೊಲ್ಲರಿಗೆ ಕಾಡುಗೊಲ್ಲ ಜಾತಿಪ್ರಮಾಣ ಪತ್ರ ನೀಡಲು ಮನವಿ

ದಾವಣಗೆರೆ (Davanagere)  :  ದಾವಣಗೆರೆ ತಾಲ್ಲೂಕಿನ 18 ಗೊಲ್ಲರಹಳ್ಳಿಗಳಲ್ಲಿ ವಾಸವಾಗಿರುವ ಕಾಡುಗೊಲ್ಲರಿಗೆ ಜಾತಿ ಪ್ರಮಾಣ ಪತ್ರದಲ್ಲಿ ಕಾಡುಗೊಲ್ಲ ಎಂದು ನಮೂದಿಸಿ…

By Dinamaana Kannada News

ದಾವಣಗೆರೆ ವಿಶ್ವವಿದ್ಯಾನಿಲಯ|ಜಾಗತಿಕ ನಾಗರಿಕತ್ವ ಅನಿವಾರ್ಯ: ಪ್ರೊ.ನಿರಂಜನ

ದಾವಣಗೆರೆ: ವಿದ್ಯಾರ್ಥಿಗಳು ಕೇವಲ ಪದವೀಧರರಾಗದೆ, ಜಾಗತಿಕ ಅನುಭವ, ಆತ್ಮವಿಶ್ವಾಸ ಮತ್ತು ವಿಶಾಲ ವೃತ್ತಿ ಅವಕಾಶಗಳೊಂದಿಗೆ ಜಾಗತಿಕ ನಾಗರಿಕರಾಗುವಿಕೆ ಅನಿವಾರ್ಯವಾಗಿದೆ ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರಾಜ್ಯ ಆಹಾರ ಆಯೋಗದಿಂದ ಹಠಾತ್ ಭೇಟಿ: ಆಹಾರ ವಿತರಣೆಯಲ್ಲಿನ ಲೋಪಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ –ಡಾ.ಹೆಚ್.ಕೃಷ್ಣ

By Dinamaana Kannada News
ನ್ಯಾ. ಮಹಾವೀರ ಮ. ಕರೆಣ್ಣವರ
ಅಭಿಪ್ರಾಯ

ಫೆ. 20 ವಿಶ್ವ ಸಾಮಾಜಿಕ ನ್ಯಾಯ ದಿನ : ಸಮಾನತೆ ಮತ್ತು ಘನತೆಯೇ ಸಮಾಜದ ಅಡಿಪಾಯ

By ನ್ಯಾ.ಮಹಾವೀರ ಮ. ಕರೆಣ್ಣವರ
Davanagere
ತಾಜಾ ಸುದ್ದಿ

ಪೌತಿ ಖಾತೆ:ರೈತರ ಮನೆ ಬಾಗಿಲಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ತಹಶೀಲ್ದಾರ್ ಸೈಯ್ಯದ್ ಕಲೀಮುಲ್ಲಾ

By Dinamaana Kannada News
Davanagere
ತಾಜಾ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ : ಪರೀಕ್ಷೆಗೆ ಮಕ್ಕಳನ್ನು ಸನ್ನದ್ದಗೊಳಿಸುವ ಕಾರ್ಯ ಭರದಿಂದ ಸಾಗಿದೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?