Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ
Blog

ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಿ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: January 18, 2026 11:13 am
Dinamaana Kannada News
Share
Davanagere
SHARE

ದಾವಣಗೆರೆ: ಈಗಿನ ಮಕ್ಕಳು ಹೆಚ್ಚು ಪ್ರಜ್ಞಾವಂತರಾಗುತ್ತಿದ್ದಾರೆ. ಮಕ್ಕಳಿಗೆ ಬೇಕಾಗಿರುವ ಸಂಸ್ಕೃತಿ, ಸಂಸ್ಕಾರಗಳನ್ನು ಒಳಗೊಂಡಿರುವ ಸಾಹಿತ್ಯವನ್ನು ಶಾಲಾ-ಕಾಲೇಜುಗಳಲ್ಲಿ ವಿಭಿನ್ನ ಕಾರ್ಯಕ್ರಮ ಗಳನ್ನು ಆಯೋಜಿಸುವ ಮೂಲಕ ನೀಡಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ ನೀಡಿದರು.

ತಾಲೂಕಿನ ಕುರ್ಕಿ-ಹಿರೇತೊಗಲೇರಿಯಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತು ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ದಾವಣಗೆರೆ ತಾಲ್ಲೂಕು ೧೨ ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ಪ್ರೀತಿ, ವಿಶ್ವಾಸ ತೋರಿಸಬೇಕು. ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿ, ಆತ್ಮವಿಶ್ವಾಸ ತುಂಬಬೇಕು. ಮೂಢನಂಬಿಕೆ ಹೋಗಲಾಡಿಸಿ, ವೈಚಾರಿಕತೆ ಬೆಳೆಸಬೇಕು. ಉತ್ತಮ ಮೌಲ್ಯಗಳನ್ನು ಕಲಿಸಿ, ಪ್ರೋತ್ಸಾಹಿಸಬೇಕು’. ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕೂಡ ಹೆಚ್ಚು ಹೆಚ್ಚು ಕಾರ್ಯ ಚಟುವಟಿಕೆಗಳನ್ನು ಶಾಲಾ- ಕಾಲೇಜು ಮಕ್ಕಳಿಗೆ ಹಮ್ಮಿಕೊಂಡು ಮಕ್ಕಳಲ್ಲಿ ಕನ್ನಡ ಸಾಹಿತ್ಯ ಓದುವ ಅಭಿರುಚಿ ಬೆಳೆಸಬೇಕೆಂದರು.

ಗ್ರಾಮೀಣ ಪ್ರದೇಶಗಳಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುವುದು ಅತ್ಯಂತ ಅವಶ್ಯಕ, ಏಕೆಂದರೆ ಅವು ಗ್ರಾಮೀಣ ಜನರ ಸಾಹಿತ್ಯ, ಸಂಸ್ಕೃತಿ, ಕಲೆಗಳನ್ನು ಪ್ರೋತ್ಸಾಹಿಸು ತ್ತವೆ, ಕನ್ನಡ ಭಾಷೆಯ ಪ್ರಚಾರ ಮಾಡುತ್ತವೆ, ಗ್ರಾಮೀಣ ಸಮಸ್ಯೆಗಳನ್ನು ಮುಖ್ಯ ವೇದಿಕೆಗೆ ತರುತ್ತವೆ, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುತ್ತವೆ, ಮತ್ತು ಸಾಹಿತ್ಯ ಪರಿಷತ್ತನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುತ್ತವೆ; ಈ ಸಮ್ಮೇಳನಗಳು ಸ್ಥಳೀಯ ಅಭಿವೃದ್ಧಿ, ಶಿಕ್ಷಣ ಹಾಗೂ ಸಾಂಸ್ಕೃತಿಕ ಪುನರುಜ್ಜೀವನಕ್ಕೆ ಪ್ರಮುಖವಾಗಿವೆ ಎಂದರು.

ಪಟ್ಟಣದ ಸಮ್ಮೇಳನಗಳಿಗೆ ಹೋಗಲು ಕಷ್ಟಪಡುವ ಗ್ರಾಮಸ್ಥರು, ಮಕ್ಕಳನ್ನು ಸಾಹಿತ್ಯ ಮತ್ತು ಸಂಸ್ಕೃತಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಇವು ಸಹಕಾರಿ. ಅಲ್ಲದೇ ಸರ್ಕಾರಿ ಶಾಲೆಗಳ ಅಭಿವೃದ್ಧಿ, ಗ್ರಾಮೀಣ ಪ್ರದೇಶಗಳಲ್ಲಿನ ಸಾಹಿತ್ಯ ಅಭಿರುಚಿ, ಸ್ಥಳೀಯ ಸಂಸ್ಕೃತಿಗಳ ರಕ್ಷಣೆ, ಪ್ರವಾಸೋದ್ಯಮ ಅಭಿವೃದ್ಧಿ ಮುಂತಾದ ಗ್ರಾಮೀಣ ಸಮಸ್ಯೆಗಳನ್ನು ಮುಖ್ಯ ವೇದಿಕೆಗೆ ತರಲು ಇವು ವೇದಿಕೆ ಒದಗಿಸುತ್ತವೆ ಎಂದು ತಿಳಿಸಿದರು.

ಮನೆಯಲ್ಲಿ ಮಕ್ಕಳಿಗೆ ಅಪ್ಪ-ಅಮ್ಮ ಎಂದು ಹೇಳುವುದನ್ನು ಪ್ರೋತ್ಸಾಹಿಸುವುದು, ಕನ್ನಡ ಭಾಷೆಯ ಪ್ರಾಮುಖ್ಯತೆ ತಿಳಿಸುವುದು ಇಂತಹ ಸಮ್ಮೇಳನಗಳ ಮೂಲಕ ನಡೆಯುತ್ತದೆ.ಅಲ್ಲದೇ ಗ್ರಾಮೀಣ ಮಟ್ಟದ ಸಮ್ಮೇಳನಗಳು ಕನ್ನಡ ಸಾಹಿತ್ಯ ಪರಿಷತ್ತನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ, ಸ್ಥಳೀಯ ಸಂಸ್ಕೃತಿ ಮತ್ತು ಅಭಿವೃದ್ಧಿಗೆ ನೆರವಾಗುವ ಪ್ರಮುಖ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು.

ದೇವಸ್ಥಾನಗಳು ಬೇರೆಯಲ್ಲ, ನಮ್ಮ ಮಕ್ಕಳು ಓದುವ ಶಾಲೆಗಳು ಬೇರೆಯಲ್ಲ; ಅಂತಹ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ನಾಳೆಯಿಂದಲೇ ಶಾಲೆಯ ಅಭಿವೃದ್ಧಿಗೆ ಕ್ರಮ ಜರುಗಿಸುತ್ತೇನೆ. ರೈತರ ಹಿತವನ್ನು ಕಾಪಾಡುತ್ತೇನೆ. ಈಗಾಗಲೇ 70  ಕೋಟಿ ರೂ. ವೆಚ್ಚದಲ್ಲಿ ಭದ್ರಾ ಕಾಲುವೆಗಳನ್ನು ಆಧುನೀಕರಣ ಕೆಲಸ ಪ್ರಾರಂಭಿಸಲಾಗಿದೆ. ಜೊತೆಗೆ 22  ಕೆರೆಗಳ ಏತನೀರಾವರಿ ಯೋಜನೆಯ ಕಾಮಗಾರಿಯನ್ನೂ ಶೀಘ್ರದಲ್ಲಿ ಪ್ರಾರಂಭಿಸುವ ಮೂಲಕ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಗಣ್ಯರು ಕೃತಿಗಳಾದ ವಿಜ್ಞಾನಧಾರೆ,ಸೌರ ಕುಟುಂಬ,ಅಂತಸಾಕ್ಷಿ,ಜೀವನಾಡಿ ಹಾಗೂ ತಾತನ ಪ್ರತಿಧ್ವನಿಗಳು ಲೋಕಾರ್ಪಣೆಗಳಿಸಲಾಯಿತು. ಕೃತಿಗಳನ್ನು ರಚಿಸಿದ ಸಾಹಿತಿಗಳನ್ನು ಸನ್ಮಾನಿಸಲಾಯಿತು.

Read also : ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ  

ಸಮ್ಮೇಳನದ ಸರ್ವಾಧ್ಯಕ್ಷರಾದ ಎಸ್.ಸಿದ್ದೇಶ್ ಕುರ್ಕಿ ಅಧ್ಯಕ್ಷತೆ ವಹಿಸಿದ್ದರು. ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಬಿ ವಾಮದೇವಪ್ಪ ತೊಗಲೇರಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುಮತಿ ಜಯ್ಯಪ್ಪ,ಕುರ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಟಿ.ಟಿ.ನಳಿನಾಕ್ಷಿ ವೆಂಕಟೇಶ್, ದೂಡ ಅಧ್ಯಕ್ಷರಾದ ದಿನೇಶ್ ಕೆ ಶೆಟ್ಟಿ , ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸರ್ವ ಸದಸ್ಯರು,ಪದಾಧಿಕಾರಿಗಳು ,ಶಾಲಾ ಮಕ್ಕಳು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಕ್ಕಳಿಗೆ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವುದು ಒಂದು ವಿಶೇಷ ಅನುಭವ. ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಲು ಇದೊಂದು ಸೂಕ್ತ ವೇದಿಕೆ.ಮಗುವಿನ ಬಾಯಿಂದ ಮೊದಲು ತೊದಲು ನುಡಿ ಹೊರ ಬರುವುದು ಮಾತೃಭಾಷೆ. ಪ್ರಾಥಮಿಕ ಹಂತದಿಂದಲ್ಲಿ ಸಾಹಿತ್ಯ ಅಭಿರುಚಿ ಮೂಡಿ ಬರಲು ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾದದ್ದು.
-ಕೆ.ಎಸ್.ಬಸವಂತಪ್ಪ, ಶಾಸಕರು, ಮಾಯಕೊಂಡ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಶಾಸಕ ಕೆ.ಎಸ್.ಬಸವಂತಪ್ಪ
Share This Article
Twitter Email Copy Link Print
Previous Article Dr. Guruprasad ಹುಚ್ಚು ನಾಯಿ ಕಡಿತ- ರೇಬಿಸ್ ಕಾಯಿಲೆ- ಮರಣ ಶತಸಿದ್ಧ: ನಗರವನ್ನು ನಾಯಿಗಳಿಂದ ಮುಕ್ತ ಮಾಡಿ-ಅಧಿಕಾರಿಗಳಿಗೆ ಕಳಕಳಿಯ ಮನವಿ   
Next Article Davanagere ಆನಗೋಡು ಮೃಗಾಲಯದಲ್ಲಿ ಚುಕ್ಕೆ ಜಿಂಕೆಗಳ ಸಾವು| ಸೂಕ್ತ ಮುನ್ನಚ್ಚರಿಕೆ ಕ್ರಮ : ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ​

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Scholarship : ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davanagere) : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ,  ಪದವಿ ಮತ್ತು…

By Dinamaana Kannada News

ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರು? : ಮೋದಿ  

ದಾವಣಗೆರೆ : ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ…

By Dinamaana Kannada News

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

ಬೆಳಗಾವಿ : ರಾಷ್ಟ್ರೀಯ ಪ್ರತಿಷ್ಠಿತ ಸಂಸ್ಥೆಯಾದ ರಹೆಮಾನ್ ಫೌಂಡೇಶನ್ ನ ಮದರ್ಸಾ ಅರೇಬಿಯಾ ನೋಮೊನಿಯ ಶಾಲೆಯ ಮೈದಾನದಲ್ಲಿ ಸಂಸ್ಥೆಯ ಅಧ್ಯಕ್ಷ …

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?