Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere judegement news | ಚಾಕು ಇರಿದ ಆರೋಪಿಗೆ 2 ವರ್ಷ ಸಜೆ
ಅಪರಾಧ ಸುದ್ದಿ

Davanagere judegement news | ಚಾಕು ಇರಿದ ಆರೋಪಿಗೆ 2 ವರ್ಷ ಸಜೆ

Dinamaana Kannada News
Last updated: September 14, 2024 2:27 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) :  ಕೊಲೆ ಯತ್ನ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 2 ವರ್ಷ 6 ತಿಂಗಳು ಕಾರಾಗೃಹ ಶಿಕ್ಷೆ  ಮತ್ತು 12 ಸಾವಿರ ರೂ. ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿ ಆದೇಶ ಹೊರಡಿಸಿದೆ.

ನಗರದ ಡಿಸಿಎಂ ಟೌನ್ ಶಿಪ್ ನ ನಿವಾಸಿ ಅಣ್ಣಪ್ಪ (34) ಶಿಕ್ಷೆಗೆ ಒಳಗಾದ ಆರೋಪಿ.

ಘಟನೆ ವಿವರ: ಹಳೆ ಚಿಕ್ಕನಹಳ್ಳಿಯ ಸಂತೋಷ್ ಕುಮಾರ್ ಮತ್ತು ಜಯರಾಜ್ ಕೇಶವ ಎಂಬುವರ ಬಳಿ  13-05-2018 ರಂದು ಅಣ್ಣಪ್ಪ 1 ಲಕ್ಷ ರೂ. ಕೈ ಸಾಲ ಪಡೆದಿದ್ದ. ಆ ದಿನವೇ ಸಂಜೆ 5.20 ಗಂಟೆಗೆ  ಸಂತೋಷ್ ಕುಮಾರ್ ಮತ್ತು ಜಯರಾಜ್ ಕೇಶವ ಇಬ್ವರು ಅಣ್ಣಪ್ಪನ ಮನೆಗೆ ಹೋಗಿ ಕೇಳಿದ್ದಾರೆ. ಸದ್ಯ ನನ್ನ ಬಳಿ ಹಣವಿಲ್ಲ 6 ತಿಂಗಳು ಬಿಟ್ಟು ಕೊಡುವುದಾಗಿ ಅಣ್ಣಪ್ಪ ಹೇಳಿದ್ದಾರೆ.

Read also : Davanagere | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅವಧಿ ವಿಸ್ತರಣೆ

ಇಲ್ಲ, ನಮಗೆ ಈಗಲೇ ಹಣ ಬೇಕೆಂದು ಸಂತೋಷ್ ಕುಮಾರ್ ಮತ್ತು ಜಯರಾಜ್ ಕೇಶವ ಕೇಳಿದ್ದಾರೆ. ಈ ವೇಳೆ ಅಣ್ಣಪ್ಪ, ಸಂತೋಷ್ ಕುಮಾರ್ ನಿಗೆ ಜಾತಿ ನಿಂದನೆ ಮಾಡಿದ್ದಾನೆ. ಅಲ್ಲದೇ ಜಯರಾಜನಿಗೆ ಚಾಕುವಿನಿಂದ ಹೊಟ್ಟೆಗೆ, ಎದೆಗೆ ಚುಚ್ಚಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ.

ಕೂಡಲೇ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಅಣ್ಣಪ್ಪನ ವಿರುದ್ಧ ದೂರು ದಾಖಲಿಸಿದ್ದಾರೆ.

ತನಿಖೆ ನಡೆಸಿದ ತನಿಖಾಧಿಕಾರಿಗಳಾದ ಎಂ.ಕೆ.ಗಂಗಲ್, ಮೊಹಮ್ಮದ್ ಬಾಬು ಅವರು ಅಣ್ಣಪ್ಪನ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಸಲ್ಲಿಸಿದ್ದರು

ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಎನ್.ಪ್ರವೀಣ್ ಕುಮಾರ್ ಅವರು ಆರೋಪ ಸಾಬೀತಾದ  ಹಿನ್ನೆಲೆಯಲ್ಲಿ ಆರೋಪಿಗೆ 2 ವರ್ಷ 6 ತಿಂಗಳು ಶಿಕ್ಷೆ, 12 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.

ದೂರುದಾರ ಪರವಾಗಿ ಸರ್ಕಾರಿ ವಕೀಲ ಜಯಪ್ಪ ಅವರು ವಾದ ಮಾಡಿದ್ದರು.

ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಎಂ.ಕೆ.ಗಂಗಲ್,   ಮೊಹಮ್ಮದ್ ಬಾಬು ಹಾಗೂ ಕೆಟಿಜೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಹಾಗೂ ಪಿರ್ಯಾದಿದಾರರ ಪರವಾಗಿ ನ್ಯಾಯಮಂಡನೆ ಮಾಡಿದ ಸರ್ಕಾರಿ ವಕೀಲರಾದ ಜಯಪ್ಪ ಅವರಿಗೆ ಎಸ್ಪಿ ಉಮಾ ಪ್ರಶಾಂತ,  ಹೆಚ್ಚುವರಿ ಎಸ್ಪಿ ವಿಜಯಕುಮಾರ್ ಎಂ. ಸಂತೋಷ , ಜಿ. ಮಂಜುನಾಥ ಶ್ಲಾಘಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ವೆರಿಕೋಸ್ ವೇನ್ಸ್ (ಉಬ್ಬಿರುವ ರಕ್ತನಾಳಗಳು) ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ 
Next Article davanagere Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿಗೆ ಪ್ರಾತಃಸ್ಮರಣೀಯರು : ಕೆ.ರಾಘವೇಂದ್ರ ನಾಯರಿ

ದಾವಣಗೆರೆ : ಕನ್ನಡ  ನಾಡಿಗೆ ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್…

By Dinamaana Kannada News

ಸಚಿವರಿಂದ ಮಾವು-ಹಲಸು ಇತರೆ ಹಣ್ಣುಗಳು ಪ್ರದರ್ಶನದ ಪೋಸ್ಟರ್ ಬಿಡುಗಡೆ

ದಾವಣಗೆರೆ (Davanagere): ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್ 16 ರಿಂದ 18 ರವರೆಗೆ ಹಮ್ಮಿಕೊಂಡಿರುವ ಮಾವು, ಹಲಸು…

By Dinamaana Kannada News

ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಶೈಕ್ಷಣಿಕ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ ಜು.09  : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?