Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

Dinamaana Kannada News
Last updated: March 2, 2026 4:24 pm
Dinamaana Kannada News
Share
Davanagere
SHARE

ದಾವಣಗೆರೆ : ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮಾ.6ರಂದು ದಾವಣಗೆರೆ ಬಂದ್ ಮಾಡಲಾಗುವುದು ಎಂದು ಸಮಾಜದ ಮುಖಂಡ ಆಲೂರು ಲಿಂಗರಾಜ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 3 ದಶಕಗಳ ಹೋರಾಟದ ಫಲವಾಗಿ ಸುಪ್ರೀಂ ಕೊರ್ಟ್ ತೀರ್ಪಿನಂತೆ ಸರ್ಕಾರವೇ ನೇಮಿಸಿದ್ದ ನಾಗಮೋಹನದಾಸ್ ಆಯೋಗವು ಮಾದಿಗ ಸಂಬಂಧಿತ ಜಾತಿಗಳಿಗೆ ಶೇ.6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.6 ಹಾಗೂ ಇತರೆ ಸಮುದಾಯದ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ಹಂಚಿಕೆ ಮಾಡಿ ವರದಿ ಸಲ್ಲಿಸಿತ್ತು. ಆದರೆ ಸರ್ಕಾರವು ಆಯೋಗದ ವರದಿಯಂತೆ ಸರ್ಕಾರಿ ಹುದ್ದೆ ನೇಮಕ ಮಾಡಿಕೊಳ್ಳದೆ, ಹಳೆಯ ಮೀಸಲಾತಿ ಪ್ರಕಾರವೇ 56,432 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಇದಕ್ಕಾಗಿ ಮಾ.6ರಂದು ದಾವಣಗೆರೆ ನಗರ ಬಂದ್ ನಡೆಸಲು ಉದ್ದೇಶಿಸಿದ್ದು, ಸಾರ್ವಜನಿಕರು ಬೆಂಬಲಿಸುವ ಮೂಲಕ ಬಂದ್ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 101 ಜಾತಿಗಳಲ್ಲಿ ಅತ್ಯಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯವು ಶಿಕ್ಷಣ, ಉದ್ಯೋಗ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲಿ ತೀರಾ ಹಿಂದುಳಿದಿದೆ. ಸಾವಿರಾರು ವರ್ಷಗಳಿಂದ ಅನೇಕ ದೌರ್ಜನ್ಯಗಳಿಗೆ ತುತ್ತಾಗುತ್ತಾ ಬಂದಿದೆ. ಇಂತಹ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಾದರೆ ಸಂವಿಧಾನದ ಆಶಯದಂತೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ವರ್ಗಿಕರಣ ಆಗಲೇಬೇಕು ಎಂದು ಅವರು ಆಗ್ರಹಿಸಿದರು.

Read also : ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಡಾ.ಹೆಚ್.ವಿಶ್ವನಾಥ, ಎಂ.ಹಾಲೇಶ, ಹೆಚ್.ಮಲ್ಲೇಶ, ಹೆಚ್.ಸಿ.ಗುಡ್ಡಪ್ಪ, ರಾಘವೇಂದ್ರ ಕಡೇಮನಿ, ಅಂಜಿನಪ್ಪ ಕಡತಿ, ಪಿ.ಜೆ.ಮಹಾಂತೇಶ, ಟಿ.ರವಿಕುಮಾರ, ರಾಮಚಂದ್ರಪ್ಪ ನರಗನಹಳ್ಳಿ, ಎಂ.ಲಿಂಗರಾಜ ಸೇರಿದಂತೆ ಇತರರು ಇದ್ದರು.

TAGGED:Davanagere Newsdinamaana.comKannada Newsಒಳ ಮೀಸಲಾತಿಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article jagalore ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (DAVANAGERE): ಸಮಾಜ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ…

By Dinamaana Kannada News

ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ  ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಿ ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ

ಬೆಂಗಳೂರು : ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ…

By Dinamaana Kannada News

ಒಳ ಮೀಸಲಾತಿ ವರ್ಗೀಕರಣ ಜಾರಿಗೆ ವಿಳಂಬ:ದಾವಣಗೆರೆ ಬಂದ್‌ಗೆ ಮಾದಿಗ ಸಂಘಟನೆಗಳ ಕರೆ

ದಾವಣಗೆರೆ.ಮಾ.1: ಒಳ ಮೀಸಲಾತಿ ವರ್ಗೀಕರಣ ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಹಾಗೂ ಮಾದಿಗ ಸಮಾಜಕ್ಕೆ ಆಗುತ್ತಿರುವ ಅನ್ಯಾಯ…

By Dinamaana Kannada News

You Might Also Like

jagalore
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ದಾವಣಗೆರೆ ಜಿಲ್ಲೆಯ ಪ್ರಯಾಣಿಕರ ನೆರವಿಗೆ ತುರ್ತು ಕ್ರಮ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?