ದಾವಣಗೆರೆ (Davanagere) : ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಜಾದ ನಗರ ಪೊಲೀಸರು ಬಂಧಿಸಿದ್ದಾರೆ.
ಟಿಪ್ಪು ನಗರದ ಗುಜರಿ ವ್ಯಾಪಾರಿ ಸಿರಾಜ್ ಖಾನ್ (46) ಬಂಧಿತ ಆರೋಪಿ.
ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕ್ಕಿ ಭಟ್ಟಿ ಪಾರ್ಕ ಬಳಿ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಮಾಹಿತಿ ಹಿನ್ನಲೆಯಲ್ಲಿ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಅವರ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ನಿರೀಕ್ಷಕ ಅಶ್ವಿನ್ ಕುಮಾರ್ ರವರ ನೇತೃತ್ವದಲ್ಲಿ ಪಿಎಸ್ಐಗಳಾದ ಇಮ್ತಿಯಾಜ್ ಮತ್ತು ಅಲ್ತಾಫ್ ಹಾಗೂ ಸಿಬ್ಬಂದಿಗಳ ತಂಡ ದಾಳಿ ಮಾಡಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತನಿಂದ 80 ಸಾವಿರ ರೂ ಮೌಲ್ಯದ 730 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ.
Read also : Davanagere theft news : 10 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಬಂಧನ
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸನೆ ವ್ಯಕ್ತಪಡಿಸಿದ್ದಾರೆ.