ದಾವಣಗೆರೆ (Davanagere) : ಪತ್ನಿ ಕೊಲೆ ಮಾಡಿದ್ದ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ,
ಚಿದಾನಂದ ಮೂರ್ತಿ ಯಾನೆ ಚಿದಾನಂದ ಆಚಾರಿ (40) ಬಂಧಿತ ಪತಿ.
ಸೆ20 ರಂದು ಚನ್ನಗಿರಿ ಠಾಣಾ ವ್ಯಾಪ್ತಿಯ ಪಾಂಡೋಮಟ್ಟಿ ಗ್ರಾಮದ ಶ್ರೀಮತಿ ಗೌರಮ್ಮ ಕೋಂ ಚಿದಾನಂದ ಮೂರ್ತಿ (40) ವರ್ಷ, ಪುಸಲಾಯಿಸಿ ತೋಟದಲ್ಲಿ ಡ್ರಿಪ್ ಬಳ್ಳಿ ಸುತ್ತೋಣವೆಂದು ಕರೆದುಕೊಂಡು ಹೋಗಿ ತೋಟದ ಪಕ್ಕದಲ್ಲಿ ಹರಿಯುತ್ತಿರುವ ಹಳ್ಳದಲ್ಲಿ ಮುಳುಗಿಸಿ ಕೊಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು ಎಂದು ಶ್ರೀ ಮತಿ ವಿಶಾಲ ಗಂಡ ಓಂಕಾರಚಾರಿ ಇವರು ಕೊಟ್ಟ ದೂರಿನ ಮೇರೆಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.
ಆರೋಪಿ ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ. ಸಂತೋಷ್ ಹಾಗೂ ಮಂಜುನಾಥ ಜಿ ರವರ ಹಾಗೂ ಚನ್ನಗಿರಿ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಶ್ಯಾಮ್ ವರ್ಗೀಸ್ ರವರ ಮಾರ್ಗದರ್ಶನದಲ್ಲಿ ಬಾಲಚಂದ್ರ ನಾಯ್ಕ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡವನ್ನು ಪ್ರಕರಣದ ಆರೋಪಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುತ್ತಾರೆ.
Read also : Davanagere | ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ : 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಆರೋಪಿ ಚಿದಾನಂದ ಆಚಾರಿ ಬೇರೊಬ್ಬ ಮಹಿಳೆಯ ಜೊತೆ ಅನೈತಿಕ ಸಂಬಂಧ ಹೊಂದಿ, ತನ್ನ ಹೆಂಡತಿ ಗೌರಮ್ಮಳನ್ನು ಕೊಲೆ ಮಾಡಿದ್ದಾಗಿ ತನಿಖೆ ವೇಳೆ ತಿಳಿದು ಬಂದಿದೆ.
ಕೊಲೆ ಪ್ರಕರಣದಲ್ಲಿನ ಆರೋಪಿತನ ಬಂಧನ ಕಾರ್ಯದಲ್ಲಿ ಯಶಸ್ವಿಯಾದ ಚನ್ನಗಿರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳ ತಂಡವನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.