Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   
ತಾಜಾ ಸುದ್ದಿ

ಒಂದು ಪದವೀಧರ ಕ್ಷೇತ್ರ, ಮತದಾರರ ನೊಂದಣಿಗೆ ಮೇ 6 ಕೊನೆ ದಿನ   

Dinamaana Kannada News
Last updated: May 3, 2024 5:17 pm
Dinamaana Kannada News
Share
DAVANAGERE DISTRICT
District Collector Dr; Venkatesh
SHARE

ದಾವಣಗೆರೆ.ಮೇ.2  :  ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ್ದು ದಾವಣಗೆರೆ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಮೇ 9 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು  ಮತದಾರರ ನೊಂದಣಿಗೆ ಮೇ 6  ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ವಿಧಾನ ಪರಿಷತ್ ಚುನಾವಣೆ ಕುರಿತು ಮಾಹಿತಿ ನೀಡುವ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ಜಿಲ್ಲೆಯಲ್ಲಿ ಮೂರು ವಿಧಾನಸಭಾ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಆಯನೂರು ಮಂಜುನಾಥ್ ಅವರು ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯರಾಗಿದ್ದು ಏಪ್ರಿಲ್ 19 ರಂದು ರಾಜೀನಾಮೆ ನೀಡಿದ್ದರು. ಎಸ್.ಎಲ್.ಭೋಜೆಗೌಡ ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿಯವರು ಸದಸ್ಯರಾಗಿದ್ದು ಇವರ ಅವಧಿ ಜೂನ್ 21 ಕ್ಕೆ ಮುಕ್ತಾಯಗೊಳ್ಳುವುದರಿಂದ ಈ ಮೂರು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುವರು ಮತ್ತು ನೈರುತ್ಯ ಶಿಕ್ಷಕರ, ಪದವೀಧರ ಕ್ಷೇತ್ರಕ್ಕೆ ಮೈಸೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು ಜಿಲ್ಲಾಧಿಕಾರಿ ಸಹಾಯಕ ಚುನಾವಣಾಧಿಕಾರಿಯಾಗಿರುವರು.

2023 ರ ಡಿಸೆಂಬರ್ ಅಂತ್ಯಕ್ಕೆ ಮತದಾರರ ವಿವರ

ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿದ್ದು ಗಂಡು 2564, ಮಹಿಳೆ 1384 ಸೇರಿ 3948 ಮತದಾರರಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ; ಬಸವಪಟ್ಟಣ-1 ಮತ್ತು 2 ನೇ ಹೋಬಳಿ, ಸಂತೆಬೆನ್ನೂರು-1 ಮತ್ತು 2 ನೇ ಹೋಬಳಿ, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಸೇರಿ ಒಟ್ಟು ಗಂಡು 688, ಹೆಣ್ಣು 246 ಸೇರಿ ಒಟ್ಟು 934,  ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನ್ಯಾಮತಿ, ಹೊನ್ನಾಳಿ, ಚನ್ನಗಿರಿ ತಾ; ಬಸವಪ್ಟಣ-1 ಮತ್ತು 2 ಹೋಬಳಿ, ಸಂತೆಬೆನ್ನೂರು 1 ಮತ್ತು 2, ಚನ್ನಗಿರಿ ತಾ; ಕಸಬಾ, ಉಬ್ರಾಣಿ ಹೋಬಳಿ, ದೇವರಹಳ್ಳಿ ಗ್ರಾಮ ಒಳಗೊಂಡಂತೆ 3900 ಗಂಡು, 2096 ಹೆಣ್ಣು ಸೇರಿ 6296 ಮತದಾರರಿದ್ದಾರೆ.

ಮತದಾರರ ನೊಂದಣಾಧಿಕಾರಿಗಳು; ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸಹಾಯಕ ಮತದಾರರ ನೊಂದಣಾಧಿಕಾರಿಗಳಾಗಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಯೋಜಿತ ಅಧಿಕಾರಿಗಳಾಗಿರುತ್ತಾರೆ. ಮತದಾರರ ನೊಂದಣಿ ವೇಳೆ ಒಬ್ಬರಿಂದ ಗರಿಷ್ಠ 5 ಅರ್ಜಿಗಳನ್ನು ಮಾತ್ರ ಮತದಾರರ ನೊಂದಣಿಗೆ ಸ್ವೀಕರಿಸಲಾಗುತ್ತದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

TAGGED:dinamaana.comElection of Legislative Council.Latest Kannada Newsಕನ್ನಡ ಸುದ್ದಿದಿನಮಾನ.ಕಾಂವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣಾ.
Share This Article
Twitter Email Copy Link Print
Previous Article davanagere ಏರೋಬಿಕ್ಸ್‍ನೊಂದಿಗೆ ಮತದಾನ ಜಾಗೃತಿ
Next Article DAVANAGERE ZILLA PANCHAYATH ಮೇ 7 ರಂದು ನಾವೆಲ್ಲರೂ ಮತದಾನ ಮಾಡೋಣ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮೌಲ್ಯಯುತ ಶಿಕ್ಷಣದ ಅನಿವಾರ್ಯತೆಯಿದೆ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ:  ಭಾರತವನ್ನು 21 ನೇ ಶತಮಾನದಲ್ಲಿ ಮುನ್ನಡೆಸಲು ಯುವಕರು ಶಕ್ತಿ ಕೇಂದ್ರವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮರ್ಥ ಜೀವನ ರೂಪಿಸಿಕೊಳ್ಳಬೇಕು…

By Dinamaana Kannada News

Davanagere : ಭದ್ರಾ ಕಾಲುವೆ- ಮಳೆ ನೀರು ಹರಿದು ನೆರೆ ಹಾನಿ: ಶಾಸಕ ಕೆ.ಎಸ್.ಬಸವಂತಪ್ಪ ಪರಿಶೀಲನೆ

ದಾವಣಗೆರೆ  (Davanagere) : ಮಾಯಕೊಂಡ ಕ್ಷೇತ್ರದ  ವ್ಯಾಪ್ತಿಯ ಭದ್ರಾ ಕಾಲುವೆಯಲ್ಲಿ ನೀರು ತುಂಬಿ ಹರಿದು ನೆರೆ ಹಾನಿಯಾದ ಪ್ರದೇಶಗಳಿಗೆ ಬುಧವಾರ…

By Dinamaana Kannada News

Davanagere | ಅಭಿವೃದ್ದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು : ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌

ದಾವಣಗೆರೆ (Davanagere) : ಪಕ್ಷಾತೀತವಾಗಿ ಒಗ್ಗಟ್ಟಿನಿಂದ ಸೇವೆಗಳನ್ನು ಮಾಡಿದರೆ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್ ಮಲ್ಲಿಕಾರ್ಜುನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?