Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆ :  ಸನ್ನದ್ದವಾಗಿರಲು ಡಿಸಿ ಸೂಚನೆ
ತಾಜಾ ಸುದ್ದಿ

ತುಂಗಭದ್ರಾ ನದಿಯಲ್ಲಿನ ಪ್ರವಾಹ ನಿರೀಕ್ಷೆ :  ಸನ್ನದ್ದವಾಗಿರಲು ಡಿಸಿ ಸೂಚನೆ

Dinamaana Kannada News
Last updated: July 23, 2024 4:28 pm
Dinamaana Kannada News
Share
honnalli
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ,ಜುಲೈ.23 :   ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಹೆಚ್ಚು ನೀರು ಬರಬಹುದೆಂದು ಅಂದಾಜಿಸಿ ನದಿ ಪ್ರವಾಹದಿಂದ ಮುಳುಗಡೆಯಾಗುವ ಪ್ರದೇಶದಲ್ಲಿ ಜನ, ಜಾನುವಾರುಗಳ ರಕ್ಷಣೆಗಾಗಿ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಮತ್ತು ತುರ್ತು ಸೇವಾ ಉಪಕರಣಗಳನ್ನು ಸನ್ನದ್ದವಾಗಿಸಲು ಅಣಕು ರಕ್ಷಣಾ ಕಾರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಕೃತಿ ವಿಕೋಪದಿಂದುಂಟಾಗುವ  ಪರಿಸ್ಥಿತಿ ಎದುರಿಸಲು ಸಿದ್ದತೆಗಾಗಿ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಮಂಗಳವಾರ ಹೊನ್ನಾಳಿಯ ರಾಜಘಾಟ್ ಬಳಿ ರಕ್ಷಣಾ ಕಾರ್ಯದ ಅಣಕು ಪ್ರದರ್ಶನ ವೀಕ್ಷಣೆ ಮಾಡಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ 2024 ರ ಜನವರಿಯಿಂದ ಜುಲೈ 23 ರ ವರೆಗೆ 263 ಮಿ.ಮೀ ವಾಡಿಕೆಗೆ 371 ಮಿ.ಮೀ ಮಳೆಯಾಗಿದೆ. ಆದರೆ ಮಲೆನಾಡಿನ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಾ ನದಿಯಿಂದ ನೀರು ಬರುತ್ತಿದ್ದು ಜುಲೈ 20 ರಂದು 96 ಸಾವಿರ ಕ್ಯೂಸೆಕ್ಸ್ ವರೆಗೆ ನದಿಯ ಮಟ್ಟ ತಲುಪಿತ್ತು. ಜುಲೈ 23 ರಂದು 33686 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು ಭದ್ರಾ ಜಲಾಶಯದಲ್ಲಿ 168.2 ಅಡಿ ನೀರಿನ ಮಟ್ಟ ಇದ್ದು ಇದು ಭರ್ತಿಯಾಗಲು ಇನ್ನೂ 19.8 ಅಡಿ ನೀರು ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಳೆಯಾಗಬಹುದಾಗಿದ್ದು ಭದ್ರಾ ಜಲಾಶಯ ಭರ್ತಿಯಾದಲ್ಲಿ ನದಿಯಲ್ಲಿ ಹೆಚ್ಚಿನ ನೀರಿನ ಹರಿವು  ಉಂಟಾಗಲಿದೆ. ಇದರಿಂದ ಕೆಲವು ಕಡೆ ಜನರಿಗೆ ಸಮಸ್ಯೆಯಾಗಲಿದೆ ಎಂದರು.

ಹೊನ್ನಾಳಿಯ ರಾಜ್‌ಘಾಟ್ ಹಾಗೂ ಬಂಬೂ ಬಜಾರ್ ಬಳಿ 28 ಕುಟುಂಬಗಳ 125 ಜನರಿಗೆ ಕಾಳಜಿ ಕೇಂದ್ರವನ್ನು ಅಂಬೇಡ್ಕರ್ ಭವನದಲ್ಲಿ ಪ್ರಾರಂಭಿಸಲು, ಹರಿಹರದ ಗಂಗಾನಗರ ಮತ್ತು ಬೆಂಕಿ ನಗರದಲ್ಲಿ 16 ಕುಟುಂಬಗಳ 64 ಜನರಿಗಾಗಿ ಎಪಿಎಂಸಿ ಭವನದಲ್ಲಿ ಮತ್ತು ತೀವ್ರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆಯಾಗುವ ಗ್ರಾಮಗಳ ಕುಟುಂಬಗಳನ್ನು ಗುರುತಿಸಿ ಮುಂಜಾಗ್ರತೆಯಾಗಿ ಎಲ್ಲೆಲ್ಲಿ ಕಾಳಜಿ ಕೇಂದ್ರಗಳನ್ನು ತಾತ್ಕಾಲಿಕವಾಗಿ ತೆರೆಯಬಹುದೆಂದು ಗುರುತು ಮಾಡಲಾಗಿದೆ ಎಂದರು.

ತುರ್ತು ಪರಿಹಾರ; ಮಳೆಯಿಂದ ಮನೆ ಹಾನಿಯಾದಲ್ಲಿ ಪೂರ್ಣ ಹಾನಿಯಾದರೆ ರೂ.1.20 ಲಕ್ಷ, ಹಾನಿ, ಭಾಗಶಃ ಹಾನಿಯಾದಲ್ಲಿ 6 ಸಾವಿರ ಮತ್ತು 4500 ಮತ್ತು ತುರ್ತು ಪರಿಹಾರವಾಗಿ ರೂ.2500 ಗಳ ಪರಿಹಾರ ನೀಡಲಾಗುತ್ತದೆ. ಇಲ್ಲಿಯವರೆಗೆ 91 ಮನೆಗಳಿಗೆ ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ಪೂರ್ಣ ಹಾನಿ ಪರಿಹಾರ ವಿತರಣೆ ಮಾಡಲಾಗಿದೆ. ಮಳೆಯಿಂದ ಬೆಳೆಗಳಿಗೆ ಹಾನಿಯಾದಲ್ಲಿ ತಕ್ಷಣವೇ ಕಂದಾಯ ಇಲಾಖೆ ಹಾಗೂ ಕೃಷಿ, ತೋಟಗಾರಿಕೆ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಿ ನಷ್ಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದರು.

ಶಾಲೆ, ಅಂಗನವಾಡಿ ಸೋರುವಿಕೆ ತಡೆಗೆ ಕ್ರಮ; ಮಳೆಯಿಂದ ಶಾಲಾ ಮತ್ತು ಅಂಗನವಾಡಿ ಕೇಂದ್ರಗಳ ಛಾವಣಿ ಸೋರುತ್ತಿದ್ದಲ್ಲಿ ತಾತ್ಕಾಲಿಕವಾಗಿ ಪ್ಲಾಸ್ಟಿಕ್ ಹೊದಿಕೆಯನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಕಟ್ಟಡಗಳು ಶಿಥಿಲವಾಗಿದ್ದಲ್ಲಿ ಮಳೆ ಬಂದಾಗ ತಾತ್ಕಾಲಿಕವಾಗಿ ಬೇರೆಡೆ ಸ್ಥಳಾಂತರ ಅಥವಾ ತಕ್ಷಣ ದುರಸ್ಥಿಗೆ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.

 ಆರೋಗ್ಯ, ನೈರ್ಮಲ್ಯಕ್ಕೆ ಸೂಚನೆ; ಮಳೆಯಿಂದ ಹೊಸ ನೀರು ಬರಬಹುದು, ಇಂತಹ ಸಂದರ್ಭದಲ್ಲಿ ಶುದ್ದ ಕುಡಿಯುವ ನೀರು ಅಥವಾ ಕಾಯಿಸಿದ ನೀರನ್ನು ಮಾತ್ರ ಬಳಕೆ ಮಾಡಬೇಕು. ಮತ್ತು ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಮಳೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಮತ್ತು ಆರೋಗ್ಯ ಇಲಾಖೆಯಿಂದ ಆಸ್ಪತ್ರೆಗಳಲ್ಲಿ ಔಷಧ ದಾಸ್ತಾನಿಟ್ಟು ಜನರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ತಿಳಿಸಿ ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಿಂದ ಸ್ವಚ್ಚತೆ ಕಾಪಾಡಲು ಮತ್ತು ಜನರಿಗೆ ಜಾಗೃತಿ ಮೂಡಿಸಲು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mayakonda ಕಳಪೆ ಕಾಮಗಾರಿ ಕಂಡ ಶಾಸಕ ಬಸವಂತಪ್ಪ ಗರಂ
Next Article Davanagere ಆರೋಗ್ಯ ಇಲಾಖೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಲೋಕಸಭಾ ಚುನಾವಣೆ : ಜೂನ್ 4 ರಂದು ಮತ ಎಣಿಕೆ, ಮಧ್ಯಾಹ್ನದೊಳಗೆ ಫಲಿತಾಂಶ  

ದಾವಣಗೆರೆ  : ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 6.30 ರಿಂದ ಭದ್ರತಾ ಕೊಠಡಿ…

By Dinamaana Kannada News

Davanagere | ಸುಯೆಜ್‌ ಕಂಪನಿಯ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆ

ದಾವಣಗೆರೆ (Davanagere) ‍ನಗರದಲ್ಲಿ ಜಲಸಿರಿ ಯೋಜನೆ ಅನುಷ್ಟಾನದ ಹೊಣೆ ಹೊತ್ತಿರುವ ಸುಯೆಜ್‌ ಕಂಪನಿಯ ವತಿಯಿಂದ  ಅಂತರರಾಷ್ಟ್ರೀಯ ಜೈವಿಕ ವೈವಿಧ್ಯತೆ ದಿನಾಚರಣೆಯ…

By Dinamaana Kannada News

DAVANAGERE | ಸಂಸದರ ಆಸರೆ : ಮಕ್ಕಳಿಗೆ ಸಂಸತ್ ವೀಕ್ಷಣೆ ಭಾಗ್ಯ

ದಾವಣಗೆರೆ (Davanagere): ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರ ಆಸರೆಯಿಂದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಕ್ಕಳಿಗೆ ಸಂಸತ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

JOB NEWS | ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?