ದಾವಣಗೆರೆ (Davanagere): ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಡಿಎಸ್‍ಎಸ್ ಸಂಘಟನೆ ವಿರೋಧ ವ್ಯಕ್ತಪಡಿಸಿ ದಾವಣಗೆರೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದೆ.
ಅವರೆಗೆರೆಯ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ವಾಣಿಜ್ಯ ಮಳಿಗೆಗಳ ಸಂಕೀರ್ಣವನ್ನು ಅನಾಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದ್ದು, ಆವರಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸೇರಿದೆ ಎನ್ನಲಾದ ಡೋರ್ ನಂ 103 ವಾಣಿಜ್ಯ ಸಂಕಿರ್ಣ ನಿರ್ಮಿಸುವುದಾಗಿ ಹೇಳಿ ಈಗ ಬೇರೆ ಪಾರ್ಕ್ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸುವುದರಿಂದ ಸಾರ್ವಜನಿಕರಿಗೆ ಪ್ರತಿ ದಿನ ಸಂಜೆ ಮತ್ತು ಬೆಳಗ್ಗೆ ವಾಯು ವಿಹಾರ ಮಾಡುವ ಜನರಿಗೆ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಜಾಗ ಪಾರ್ಕಿಗೆ ಸೀಮಿತ ಮಾಡಬೇಕು, ಒಂದೇ ವೇಳೆ ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಅವಕಾಶ ಕೊಟ್ಟರೆ , ಇಲ್ಲಿ ಹಿಂದುಳಿದ ಸಮುದಾಯಗಳು ಹೆಚ್ಚಿರುವ ಕಾರಣದಿಂದ ಬಾಬು ಜಗಜೀವನರಾಂ ಸಮುದಾಯ ಭವನ ಅಥವಾ ಮಿನಿ ಅಂಬೇಡ್ಕರ ಸಮುದಾಯ ಭವನ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಡಿಎಸ್‍ಎಸ್ ತಾಲೂಕು ಸಂಘಟನೆ ಸಂಚಾಲಕ ಎಂ.ಚಂದ್ರಪ್ಪ ಮನವಿ ಮಾಡಿದ್ದಾರೆ.
Read also : Davanagere | ಯುವ ಪೀಳಿಗೆಗೆ ಚನ್ನಮ್ಮನ ಇತಿಹಾಸದ ಅರಿವು ಅವಶ್ಯ
ಒಂದೇ ನಮ್ಮ ಮನವಿ ಮೀರಿ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅವಕಾಶಕೊಟ್ಟರೆ ಡಿಎಸ್‍ಎಸ್ ಸಂಘಟನೆಯಿಂದ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.