ದಾವಣಗೆರೆ .ಆ05 (Davanagere) 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್ನಲ್ಲಿ ಹೆಚ್ಚುವರಿ ಕಂಬಗಳನ್ನು ಅಳವಡಿಸಿಕೊಂಡು ಎಲ್.ಟಿ ಮಾರ್ಗವನ್ನು ವಿಸ್ತರಣೆ ಮಾಡಲು ತುರ್ತುಕಾರ್ಯ ಹಮ್ಮಿಕೊಂಡಿರುವುದರಿಂದ
ಆ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-12 ಬಸವೇಶ್ವರ ಫೀಡರ್, ಎಸ್.ಎಸ್. ಬಡಾವಣೆ, ಬಿ.ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ,
ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ (Bescom) ತಿಳಿಸಿದೆ.