Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ
ತಾಜಾ ಸುದ್ದಿ

Davangere University : ಮೊಬೈಲ್ ಗೀಳು ಬಿಡಿ, ಪುಸ್ತಕ ಓದಿ : ಪ್ರೊ.ಕುಂಬಾರ

Dinamaana Kannada News
Last updated: August 14, 2024 12:01 pm
Dinamaana Kannada News
Share
davanagere vv
ಡಾ.ಎಸ್.ಆರ್ ರಂಗನಾಥನ್ ಅವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ
SHARE

ದಾವಣಗೆರೆ  (Davangere)  : ಜ್ಞಾನಾರ್ಜನೆಯ ಜೊತೆಗೆ ಮಾನಸಿಕ ಆರೋಗ್ಯದ ಉದ್ದೇಶಕ್ಕಾಗಿ ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ ಬಿ.ಡಿ ಕುಂಬಾರ ಹೇಳಿದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಡಾ.ಎಸ್.ಆರ್ ರಂಗನಾಥನ್ ಅವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕುಂಠಿತವಾಗುತ್ತಿದೆ. ಭವಿಷ್ಯದ ಬಗ್ಗೆ ಸ್ಪಷ್ಟ ಕಲ್ಪನೆ ಇಲ್ಲ, ಅಧ್ಯಯನ ಮಹತ್ವವನ್ನು ತಿಳಿಯುವ ಪ್ರಯತ್ನವೂ ಆಗುತ್ತಿಲ್ಲ. ಇದು ಆತಂಕಕಾರಿ ಸಂಗತಿ. ಪ್ರಸ್ತುತ ಜಗತ್ತು ಜ್ಞಾನಾಧಾರಿತವಾಗಿದೆ. ಅಧ್ಯಯನಶೀಲ ಗುಣವು ವ್ಯಕ್ತಿತ್ವದ ವಿಕಸನಕ್ಕೆ ನೆರವಾಗುತ್ತದೆ. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸವನ್ನು ತಮ್ಮ ಜೀವದ ಭಾಗವಾಗಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೀವನದ ಗುರಿಯನ್ನು ಸಾಧಸುವಲ್ಲಿ ಗ್ರಂಥಾಲಯವು ಪ್ರಮುಖ ಪಾತ್ರ ವಹಿಸುತ್ತದೆ. ಮಹಾನ್ ವ್ಯಕ್ತಿಗಳಾದ ಮಹಾತ್ಮ ಗಾಂಧಿ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್ ಅಂಬೇಡ್ಕರ್, ರಾಧಾಕೃಷ್ಣನ್ ಹಾಗೂ ಡಾ. ಎಸ್.ಆರ್ ರಂಗನಾಥನ್ ಅವರ ಜೀವನದ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಇತಿಹಾಸ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೋ ವೆಂಕಟರಾವ್ ಪಲಾಟೆ ಮಾತನಾಡಿ, ಕಲಿತ ವಿದ್ಯೆ ಮತ್ತು ಅನುಭವಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಹಾಗೆಯೇ ಗ್ರಂಥಾಲಯವು ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯ ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಆತ್ಮವಿದ್ದಂತೆ. ವಿದ್ಯಾರ್ಥಿಗಳು ಓದಿನ ಅಭಿರುಚಿ ಬೆಳೆಸಿಕೊಂಡು, ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ವಿನಿಯೋಗಿಸಿದರೆ ಭವಿಷ್ಯವು ಉತ್ತಮವಾಗಿರುತ್ತದೆ ಎಂದು ಹೇಳಿದರು.

Read also : Davangere news : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸೂಕ್ಷ್ಮ  ಜೀವವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೋ .ಮಹಾಲಿಂಗಪ್ಪ ಅವರು ಭಾರತದ ಗ್ರಂಥಾಲಯ ಪಿತಾಮಹ ಡಾ.ರಂಗನಾಥನ್ ಅವರ ‘ದಿ ಫೈವ್ ಲಾಸ್ ಆಫ್ ಲೈಬ್ರರಿ’ ಕುರಿತು ವಿವರಿಸಿದರು. ಸಹಾಯಕ ಗ್ರಂಥಪಾಲಕಿ ಡಾ.ಜಿ.ನೀಲಮ್ಮ ಸ್ವಾಗತಿಸಿದರು. ಸಹಾಯಕ ಗ್ರಂಥಪಾಲಕ ಡಾ.ನಾಗರಾಜ್ ವಂದಿಸಿದರು. ಬೋರಣ್ಣ ಕಾರ್ಯಕ್ರಮ ನಿರೂಪಿಸಿದರು.

TAGGED:Davanagere districtDinamana.comLatest Kannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE HARIHARA DAVANAGERE NEWS : ಹರ್ ಘರ್ ತಿರಂಗಾ-2024 -ಸ್ವಾತಂತ್ರ ಹೋರಾಟಗಾರ ನೆನೆಯುವ ಅವಕಾಶ
Next Article Davanagere Davanagere Scholarship : ವಿದ್ಯಾಸಿರಿ, ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere punishment news | ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಆ.17 (Davangere District) : ಪ್ರಿಯತಮನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಹೆಂಡತಿ ಮತ್ತು ಪ್ರಿಯಕರನಿಗೆ ಜೀವಾವಧಿ ಶಿಕ್ಷೆ …

By Dinamaana Kannada News

ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ

ದಾವಣಗೆರೆ,ಮಾ.14 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳನ್ನು ತಿಳಿಸಿಕೊಡುವುದರೊಂದಿಗೆ ಇತಿಹಾಸ, ಸಾಹಿತ್ಯಾತ್ಮಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕವುಳ್ಳ ಗ್ರಂಥಾಲಯವನ್ನು…

By Dinamaana Kannada News

ರಾಷ್ಟ್ರೀಕೃತ ಬ್ಯಾಂಕ್‌ಗಳ  ಖಾಸಗೀಕರಣ ರಾಷ್ಟ್ರೀಯ ದುರಂತ : ಕೆ.ರಾಘವೇಂದ್ರ ನಾಯರಿ

ದಾವಣಗೆರೆ : ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) ಸುದೀರ್ಘವಾದ ಹೋರಾಟದ ಫಲವಾಗಿ 1969 ರ ಜುಲೈ 19…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಜೂ.19 ರಂದು ಬೆ. 10 ರಿಂದ ಸ. 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಪ್ರಧಾನ ಮಂತ್ರಿ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?