ದಾವಣಗೆರೆ, ಜ. 25: ಜಿಲ್ಲೆಯಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸೈಕಲ್ ಜಾಥಾಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ನಗರದ ತರಳಬಾಳು ಶಾಲೆಯ ಆವರಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಅವರು ಹಸಿರು ನಿಶಾನೆ ತೋರುವ ಮೂಲಕ ಜಾಥಾವನ್ನು ಉದ್ಘಾಟಿಸಿದರು.
ಪ್ರತಿಜ್ಞಾವಿಧಿ ಸ್ವೀಕಾರ :
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಮಲ್ಲನಾಯ್ಕ ಅವರು ನೆರೆದಿದ್ದವರಿಗೆ ಮತದಾರರ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಹಾಗೂ ಅರ್ಹರು ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
Read also : ಸಂತೋಷಕುಮಾರ್ ಅವರಿಗೆ ಅತ್ಯುತ್ತಮ ಮತದಾರರ ನೊಂದಣಾಧಿಕಾರಿ ಪ್ರಶಸ್ತಿ
ಜಾಥಾದ ಹಾದಿ: ತರಳಬಾಳು ಶಾಲೆಯಿಂದ ಆರಂಭಗೊAಡ ಸೈಕಲ್ ಜಾಥಾವು ನಗರದ ಪ್ರಮುಖ ರಸ್ತೆಗಳಾದ : ಗುಂಡಿ ಸರ್ಕಲ್ ವಿದ್ಯಾರ್ಥಿ ಭವನ, ಜಯದೇವ ಸರ್ಕಲ್‌ನಲ್ಲಿ ಮುಕ್ತಾಯಗೊಂಡಿತು.
ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ರೇಣುಕಾ, ಬಿಇಓ ಪುಷ್ಪಾವತಿ, ಯೋಜನಾಧಿಕಾರಿ ಮಹಾಂತೇಶ್ ಸೇರಿದಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಕ್ರೀಡಾ ವಸತಿ ನಿಲಯದ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
