ದಾವಣಗೆರೆ: ನಗರದಲ್ಲಿ ಇದೇ ಮಾರ್ಚ್ 10ರಿಂದ ಜಿಲ್ಲಾಮಟ್ಟದ ಬೃಹತ್ ಉದ್ಯೂಗ ಮೇಳ 2025 (Level Job Fair 2025) ಆಯೋಜಿಸಿದ್ದು, ಜಿಲ್ಲೆಯ ನಿರುದ್ಯೋಗಿಗಳಿಗೆ ಸುರ್ವಣ ಅವಕಾಶ ಕಲ್ಪಿಸಲಾಗಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ ಆಯೋಜಿಸಿದ್ದ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ನೂರಾರು ಯುವಜನತೆ ಕೆಲಸ ಗಿಟ್ಟಿಸಿಕೊಂಡು ಸ್ವಾವಲಭಿ ಜೀವನ ನಡೆಸುತ್ತಿದ್ದಾರೆ. ಈ ಬಾರಿ ಕೂಡ ಯಶ್ವಸ್ವಿ ಉದ್ಯೋಗ ಮೇಳಕ್ಕೆ ದಾವಣಗೆರೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹೇಳಿದ್ದಿಷ್ಟು
ಜಿಲ್ಲಾಡಳಿತ ಮತ್ತು ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯ ಮಿಷನ್ ಸಹಯೋಗದಲ್ಲಿ ನಗರದ ಹದಡಿ ರಸ್ತೆಯಲ್ಲಿರುವ ಐಟಿಐ ಕಾಲೇಜು ಆವರಣದಲ್ಲಿ ಮಾ.15ರಂದು ಬೆಳಗ್ಗೆ 10ರಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗವನ್ನರಿಸಿ ಜಿಲ್ಲೆಯನ್ನು ತೊರೆದು ದೇಶ ಮತ್ತು ವಿದೇಶದ ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಉದ್ಯೋಗ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದರು.
ಹಿಂದಿನ ಉದ್ಯೋಗ ಮೇಳದಲ್ಲಿ 3000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ
ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸುವ ಮೂಲಕ ಅಭ್ಯರ್ಥಿಗಳಿಗೆ ಸ್ಥಳೀಯವಾಗಿ ಕಲ್ಪಿಸಲು ಅನುದಾನ ಬಿಡುಗಡೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕಳೆದ 3 ವರ್ಷದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಸುಮಾರು 3000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿ 550ಕ್ಕೂ ಹೆಚ್ಚು ಅಭ್ಯರ್ಥಿಗಳು ಉದ್ಯೋಗ ಪಡೆದು ಸ್ವಾವಲಂಬಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಮಾ.15ರಂದು ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳಕ್ಕೆ 50ಕ್ಕೂ ಹೆಚ್ಚು ಅನೇಕ ಬಹುರಾಷ್ಟ್ರೀಯ ಖಾಸಗಿ ಕಂಪನಿಗಳು, ಕೈಗಾರಿಕೆಗಳು ಭಾಗವಹಿಸಲಿದ್ದು, ಎಲ್ಲಾ ಸ್ತರಗಳಲ್ಲಿ 5000ಕ್ಕೂ ಹೆಚ್ಚು ಉದ್ಯೋಗಗಳು ಖಾಲಿ ಇವೆ. ಹುದ್ದೆಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಉದ್ಯೋಗ ಮೇಳದಲ್ಲಿ ಕಳೆದ ವರ್ಷ 1000 ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ 2000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಿದ್ದಾರೆ. ಈಗಾಗಲೇ ಈ ಬಾರಿ 1000ಕ್ಕೂ ಹೆಚ್ಚು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿದ್ದು, ಸುಮಾರು 5000ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಉದ್ಯೋಗ ಮೇಳಕ್ಕೆ ನೋಂದಣಿ ವಿಧಾನ
ಎನ್‌ಐಸಿ ಮೂಲಕ ಯುವನಿಧಿ ಫಲಾನುಭವಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸೂಚಿಸಿ ಸಂದೇಶ ರವಾನಿಸಲಾಗಿದೆ. ಆನ್‌ಲೈನ್ ನೋಂದಣಿಗೆ ಗೂಗಲ್ ಲಿಂಕ್ ರಚಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಪ್ರಚಾರ ಮಾಡಲಾಗಿದೆ. ಸಂದರ್ಶನಕ್ಕಾಗಿ ಸುಮಾರು 40 ಕೊಠಡಿ ಸಿದ್ಧತೆ ಮಾಡಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳ ವಿಶೇಷ ತಂಡ ರಚಿಸಲಾಗಿದೆ. ಸ್ವಚ್ಛತೆ, ಕುಡಿಯುವ ನೀರು, ಆರೋಗ್ಯ ಸುರಕ್ಷತೆ, ಲಘು ಉಪಹಾರಕ್ಕೆ ಎಲ್ಲಾ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಚಾಲನೆ ನೀಡಲಿದ್ದು, ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು ಭಾವಹಿಸಲಿದ್ದಾರೆ ಎಂದು ತಿಳಿಸಿದರು.