ದಾವಣಗೆರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿAದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
Read also : ದಾವಣಗೆರೆ:ಗ್ರಂಥಾಲಯ ಪುಸ್ತಕಗಳ ಆಯ್ಕೆಗೆ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ್ಲ ತಿಳಿಸಿದ್ದಾರೆ.
