ದಾವಣಗೆರೆ: ಹಿರಿಯ ಮುತ್ಸದ್ದಿ ರಾಜಕಾರಣಿ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಕಳೆದುಕೊಂಡು ದಾವಣಗೆರೆ ಅನಾಥವಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ವಿಷಾದಿಸಿದರು.
Read also : ವಿಶ್ರಾಂತಿಗೆ ಜಾರಿದ ಧಣಿಗೆ ಅಂತಿಮ ವಿದಾಯ
ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆ ಎಂದೇ ಭಾವಿಸಿದ್ದೆವು. ಆದರೆ, ಅವರ ನಿಧನ ದಾವಣಗೆರೆ ಮಾತ್ರವಲ್ಲ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
