Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

Dinamaana Kannada News
Last updated: September 13, 2025 12:28 pm
Dinamaana Kannada News
Share
loka adlat davanagere
SHARE

ದಾವಣಗೆರೆ : ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಲೋಕ್ ಆದಾಲತ್‌ನಲ್ಲಿ ವಿವಾಹ ವಿಚ್ಚೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ 24 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು ನ್ಯಾಯಾಧೀಶ ಸಮ್ಮುಖದಲ್ಲಿ ತೀರ್ಮಾನಿಸಿದರು.

ದಾವಣಗೆರೆ ನ್ಯಾಯಲಯಗಳಲ್ಲಿ 20, ಹರಿಹರ ತಾಲ್ಲೂಕು ನ್ಯಾಯಾಲಯಗಳಲ್ಲಿ 03, ಚನ್ನಗಿರಿ ತಾಲ್ಲೂಕು ನ್ಯಾಯಾಲಯಗಳಲ್ಲಿ 01, ಪ್ರಕರಣದಲ್ಲಿ ವಿವಾಹ ವಿಚ್ಛೇಧನ ಮತ್ತು ಜೀವನಾಂಶಕ್ಕಾಗಿ ಪ್ರಕರಣ ದಾಖಲಿಸಿದ್ದ ಪ್ರಕರಣ ಹೀಗೆ ಜಿಲ್ಲೆಯಲ್ಲಿ ಒಟ್ಟಾರೆ 24 ಜೋಡಿಗಳು ಒಂದಾಗಿ ಮತ್ತೊಮ್ಮೆ ಸಹಬಾಳ್ವೆ ನಡೆಸಲು ತೆರಳಿದರು.

seem1 dinamaana ads

ಮರು ಹೊಂದಾಣಿಕೆಯಾದ ಜೋಡಿಗಳಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ರ್ಕಾಯದರ್ಶಿಗಳು, ವಕೀಲರ ಸಂಘದ ಅಧ್ಯಕ್ಷರು ಮತ್ತು ಇತರರು ಅಭಿನಂಧನೆ ಸಲ್ಲಿಸಿ ಒಂದಾದ ಜೋಡಿಗಳ ಮುಂಬರುವ ಜೀವನ ಸುಖಕರವಾಗಲೀ ಎಂದು ಸಿಹಿ ಹಂಚಿ ಹಾರೈಸಿದರು.

ಸರ್ವೋಚ್ಚ ನ್ಯಾಯಾಲಯ, ಕರ್ನಾಟಕ ಉಚ್ಚ ನ್ಯಾಯಾಲಯಗಳ ನಿರ್ದೇಶನದಂತೆ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಹಿನ್ನಯಲ್ಲಿ ಸೆ 13 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್ ನಡೆದು ಜಿಲ್ಲೆಯಲ್ಲಿ ಒಟ್ಟು 5684 ಜಾರಿಯಲ್ಲಿರುವ ಪ್ರಕರಣಗಳು ಮುಕ್ತಾಯಗೊಂಡು 10,37,26,307/- ಹಣದ ಪರಿಹಾರ ಆಗಿದೆ ಮತ್ತು 7,19,455 ವ್ಯಾಜ್ಯಪೂರ್ವ ಪ್ರಕರಣಗಳು ಮುಕ್ತಾಯಗೊಂಡು 61,46,80,196/- ಹಣದ ವ್ಯವಹಾರದ ಸರ್ಕಾರಿ ವಸೂಲಾತಿ ಮತ್ತು ಪರಿಹಾರ ಇತ್ಯಾದಿಯಾಗಿ ರಾಜೀ ಮೂಲಕ ಮುಕ್ತಾಯಗೊಂಡಿವೆ.

46 ಅಪರಾಧಿಕ ಪ್ರಕರಣಗಳು, 142 ಚಕ್ ಅಮಾನ್ಯ ಪ್ರಕರಣಗಳು, 29 ಬ್ಯಾಂಕ್ ವಸೂಲಾತಿ ಕೇಸ್‌ಗಳು, 15 ಇತರೆ ಹಣ ವಸೂಲಾತಿ, 55 ಅಪಘಾತ ಪರಿಹಾರ ಪ್ರಕರಣಗಳು, 88 ವಿದ್ಯುತ್ ಕಳ್ಳತನದ ಪ್ರಕರಣಗಳು, 35 ಪಾಲು ವಿಭಾಗಕ್ಕಾಗಿ ದಾಖಲಿಸಿದ ದಾವೆಗಳು, 54 ಮೊಟಾರು ವಾಹನ ಪರಿಹಾರ ಜಾರಿ ಅರ್ಜಿ, 65 ಇತರೆ ಜಾರಿ ಅರ್ಜಿಗಳು ಅಲ್ಲದೆ ಹಲವು ಕಾರಣಕ್ಕಾಗಿ ದಾಖಲಿಸಿದ 60 ದಾವೆಗಳು ಮತ್ತು ಜೀವನಾಂಶ ಕೋರಿ ದಾಖಲಿಸಿದ್ದ ದಾವೆಗಳು 47 ರಾಜೀ ಮೂಲಕ ಇತ್ಯರ್ಥಗೊಂಡಿರುತ್ತವೆ. ಇದಲ್ಲದೇ ಇತರೆ ಪ್ರಕರಣಗಳು ಸೇರಿ ಒಟ್ಟು 5,684 ಜಾರಿಯಲ್ಲಿದ್ದ ಪ್ರಕರಣಗಳು ಇತ್ಯರ್ಥಗೊಂಡಿವೆ.

ಜಿಲ್ಲೆಯಾದ್ಯಂತ ಸುಮಾರು 845 ಕಿಂತ ಹೆಚ್ಚು ಶಾಲಾ ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರಗಳ ಕುರಿತು ಕಂದಾಯ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ರಾಜಿ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಶ್ಯಕ್ಕಾಗಿ ಮತ್ತು ಅವರುಗಳಿಗೆ ಸರ್ಕಾರದಿಂದ ಬರಬಹುದಾದ ವಿದ್ಯಾರ್ಥಿ ವೇತನ ಹಾಗೂ ಇತರೆ ಅನುಕೂಲತೆಗಳಿಗೆ ಅನುವು ಮಾಡಿಕೊಡಲಾಯಿತು.

Read also : ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

ವ್ಯಾಜ್ಯಾ ಪೂರ್ವ ಪ್ರಕರಣಗಳಾದ ಬ್ಯಾಂಕ್ ಸಾಲ ವಾಸೂಲಾತಿ, ಕಾರ್ಮಿಕ ವ್ಯಾಜ್ಯಾಗಳು, ನೀರಿನ ಬಾಕಿ ವಸೂಲಾತಿ, ಕಂದಾಯ ಪ್ರಕರಣಗಳು, ಟ್ರಾಫಿಕ್ ಪ್ರಕರಣಗಳು ಇತ್ಯಾದಿ ಸೇರಿದಂತೆ ಒಟ್ಟಾರೆಯಾಗಿ 7,19,455 ಪ್ರಕರಣಗಳು ಇತ್ಯರ್ಥಗೊಂಡು ಮೇಲ್ಕಾಣಿಸಿದ ಎಲ್ಲಾ ಪ್ರಕರಣಗಳಿಂದಾಗಿ 61,46,80,196/-ವಸೂಲಾತಿಯಾಗಿದೆ. ಸದರಿ ಪ್ರಕರಣಗಳಲ್ಲಿ ಸರ್ಕಾರವು ಸಂಚಾರ ಇ-ಚಲನ್ ಪ್ರಕರಣಗಳಿಗೆ ಸಂಬAಧಪಟ್ಟ 25,772 ಪ್ರಕರಣಗಳೂ ಕೂಡ ಸೇರಿವೆ.

ರಾಜೀ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡ ಕಕ್ಷಿದಾರರಿಗೆ. ಹೆಚ್ಚು ಪ್ರಕರಣಗಳು ರಾಜೀಯಾಗಲು ಮತ್ತು ಪಕ್ಷಗಾರರಿಗೆ ಯೋಗ್ಯ ಮಾಹಿತಿ, ಕಾನೂನು ಸಲಹೆ ಮತ್ತು ಮಾಹಿತಿಯನ್ನು ನೀಡಿದ ಜಿಲ್ಲೆಯ ಎಲ್ಲಾ ಗೌ॥ ನ್ಯಾಯಾಧೀಶರಿಗೂ, ಸಂಧಾನಕಾರರಿಗೂ, ವಕೀಲರಿಗೂ, ಲೋಕ ಅದಾಲತ್ ಯಶಸ್ವಿಗೊಳಿಸಲು ಸಹಕಾರಿಯಾದ ನ್ಯಾಯಾಂಗ ಇಲಾಖೆ ಎಲ್ಲರಿಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾವೀರ ಮ ಕರಣ್ಣವರ ಅಭಿನಂದಿಸಿದ್ದಾರೆ.

job news dinamaana ads
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ
Next Article MLA Basavanthappa ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಆಗಸ್ಟ್ 9 ಶನಿವಾರದಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಆ.08: ದಾವಣಗೆರೆ ನಗರ ಉಪವಿಭಾಗ -2 ವ್ಯಾಪ್ತಿಯ 33/11 ಕೆವಿ ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-15…

By Dinamaana Kannada News

ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್

ದಾವಣಗೆರೆ (Davanagere): ತಮಿಳು ಕನ್ನಡಕ್ಕೆ ಜನ್ಮ ನೀಡಿತು" ಎಂಬ ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು…

By Dinamaana Kannada News

ದಾವಣಗೆರೆ|ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆಗ್ರಹ

ದಾವಣಗೆರೆ: ಮಕ್ಕಳ ಜೀವ ರಕ್ಷಣೆ ಹಿತದೃಷ್ಟಿ ಹಾಗೂ ಪೋಷಕರು ನಿರಳವಾಗಿ ಮಕ್ಕಳನ್ನು ಶಾಲೆಗೆ ಕಳಿಸಲು ದುಃಸ್ಥಿತಿಯಲ್ಲಿರುವ ಶಾಲಾ ಕೊಠಡಿಗಳನ್ನು ತುರ್ತಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ

By Dinamaana Kannada News
Davanagere
ತಾಜಾ ಸುದ್ದಿ

ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?